• Sun. Apr 28th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಪ್ರಜಾಪ್ರಭುತ್ವ ತತ್ವಗಳನ್ನು ಉತ್ತೇಜಿಸುವ ಮತ್ತು ಮೌಲ್ಯಗಳನ್ನು ಎತ್ತಿ ಹಿಡಿಯುವ ಸಲುವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ. ಭಾರತ ಸಂವಿಧಾನದ ಪ್ರಸ್ತಾವನೆಯು ಪ್ರಜಾಸತ್ಮಾಕ ಮೌಲ್ಯಗಳ ಘನತೆಯನ್ನು ಹೆಚ್ಚಿಸುವ ಪ್ರತೀಕವಾಗಿದೆ ಎಂದು ತಹಸೀಲ್ದಾರ್ ಯು.ರಶ್ಮಿ ಹೇಳಿದರು.

ಪಟ್ಣಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಎದುರು ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪಂಚಾಯ್ತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿ ನಂತರ  ಮಾತನಾಡಿದದರು.

ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿ ನಮೂದಿಸಿರುವ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮೌಲ್ಯಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ, ಪ್ರಜಾಪ್ರಭುತ್ವಕ್ಕೆ ನೈಜ ಅರ್ಥ ಸಿಗುತ್ತದೆ. ಪ್ರಸ್ತಾವನೆ ಅಂಶಗಳು ಕೇವಲ ಓದುವುದಕ್ಕೆ ಸೀಮಿತವಾಗದೇ ಜೀವನದ ಪಥವಾಗಬೇಕು ಎಂದರು.

ಪ್ರತಿಯೊಂದು ಶಾಲಾ ಕಾಲೇಜು ಮತ್ತು ಇಲಾಖೆಗಳಲ್ಲಿ ಪ್ರಜಾ ಪ್ರಭುತ್ವದ ದಿನದ ಅಂಗವಾಗಿ ಪ್ರಸ್ಥಾವನೆ ವಾಚನ ಮಾಡುವುದು ದೇಶದ ಘನತೆಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ ಎಂದು ತಿಳಿಸಿದರು.

ಅಧಿಕಾರಿಗಳ ಗೈರು, ಆಕ್ಷೇಪ ವ್ಯಕ್ತಪಡಿಸಿದ ದಲಿತ ಮುಖಂಡ.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ಅಡಿಪಾಯವಾಗಿದೆ, ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಪುರಸಭೆ ಸದಸ್ಯರು ಗೈರು ಆಗಿರುವುದನ್ನು ಖಂಡಿಸಿದ ದಲಿತ ಸಮಾಜ ಸೇನೆಯ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿ ಭಾರಿ ಬಹಳಷ್ಟು ಅಧಿಕಾರಿಗಳು ಬಹುತೇಕ ಸರ್ಕಾರಿ ಕಾರ್ಯಕ್ರಮಗಳಿಗೆ ಹಾಜರಾಗುವುದಿಲ್ಲ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಹಬ್ಬಗಳಿಗೆ ಉಪನೋಂದಣಾಧಿಕಾರಿ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಹಾಗೂ ಹಲವು ತರೆ ಇಲಾಖೆ ಅಧಿಕಾರಿಗಳು ಹಾಜರಾಗದೇ ಇರುವುದು ಈ ರಾಷ್ಟಕ್ಕೆ ಮಾಡಿದ ಅಪಮಾನವೆಂದರು.

ಅಧಿಕಾರಿಗಳ ಗೈರು ಹಾಜರಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಯು.ರಶ್ಮಿ, ಜಿಲ್ಲೆಯಾದ್ಯಂತ ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಪ್ರಜಾಪ್ರಭುತ್ವ ದಿನವನ್ನು ಆಯೋಜನೆ ಮಾಡಲು ನಿರ್ದೇಶಿರುವ ಕಾರಣ ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ.

ನಾನು ಅಧಿಕಾರ ವಹಿಸಿಕೊಂಡ ನಂತರ ೫ ಸಭೆಗಳನ್ನು ಏರ್ಪಡಿಸಿದ್ದೇನೆ. ಅವುಗಳಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿ ಹಾಗೂ ಸಬ್ ರಿಜಿಸ್ಟಾರ್ ಅಧಿಕಾರಿ ೩ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ನೋಟಿಸ್ ನೀಡಲಾಗಿದೆ.

ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಲಾಗುವುದು ಹಾಗೂ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಎಲ್ಲಾ ದಲಿತಪರ ಸಂಘಟನೆಗಳ ನಾಯಕರಿಗೆ ಮಾಹಿತಿ ನೀಡಲಾಗಿದ್ದು, ಯಾವ ಕಾರಣಕ್ಕೆ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ ಎಂಬುವುದರ ಬಗ್ಗೆ ತಿಳಿದಿಲ್ಲ ಎಂದರು.

ಈ ಸಂದರ್ಭದಲ್ಲಿ ತಾಪಂ ಇಓ ಹೆಚ್.ರವಿಕುಮಾರ್, ಪುರಸಭೆ ಸಿಒ ಎಂ.ಮೀನಾಕ್ಷಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಾರೆಡ್ಡಿ, ಅಂಜಲಿದೇವಿ, ಆರೋಗ್ಯ ನಿರೀಕ್ಷಕ ಗೋವಿಂದರಾಜುಲು, ಅಕ್ಷರ ದಾಸೋಹ ನಿರ್ದೇಶಕ ಯುವರಾಜು, ಪುರಸಭೆ ಸದಸ್ಯರಾದ ಶಫಿ, ಗಂಗಮ್ಮ, ರತ್ನಮ್ಮ, ಪ್ರಶಾಂತ್, ರಾಕೇಶ್, ದಲಿತ ಮುಖಂಡ ಅ.ನಾ.ಹರೀಶ್ ಇತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!