• Sat. Jul 27th, 2024

PLACE YOUR AD HERE AT LOWEST PRICE

KOLARA, ಕೋಲಾರ ಬ್ರೇಕಿಂಗ್; ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಮೀಸಲಿಟ್ಟ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗೆ ಬಳಸುವ ಮೂಲಕ ಆ ಸಮುದಾಯದ ಜನರಿಗೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪ ಮಾಡಿದರು.

ಕೋಲಾರದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಕರೆಂಟ್ ಕೊಡ್ತಿಲ್ಲ. ರೈತರು ಬೆಳೆದ ಬೆಳೆಯನ್ನು ಉಳಿಸಿಕೊಳ್ಳೋದಕ್ಕೆ ಆಗ್ತಿಲ್ಲ. ನಾಡಿನ ಜನರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಸರ್ಕಾರದಲ್ಲಿ ವರ್ಗಾವಣೆ ದಂದೆ ಶುರುವಾಗಿದೆ. ಕೆಲಸಿಅಧಿಕಾರಿಗಳು ವರ್ಗಾವಣೆ ಆಗಿದ್ದಾರೆ ಪೋಸ್ಟಿಂಗ್ ಕೊಟ್ಟಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ಈ ರೀತಿ ಸರ್ಕಾರ ಬಂದಿಲ್ಲ. ತಮಿಳುನಾಡಿಗೆ ನೀರು ಹರಿಸೋದನ್ನು ನಿಲ್ಲಿಸಬೇಕು. ಕುಡಿಯುವ ನೀರಿಗೆ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ದಲಿತರ 11104 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳು ಸೇರಿ ಬೇರೆದಕ್ಕೆ ಬಳಸುತ್ತಿದ್ದಾರೆ. ದಲಿತರ ಹಣ ಶಿಕ್ಷಣಕ್ಕೆ, ಉದ್ಯೋಗಕ್ಕೆ ಕೊಡಬೇಕಿತ್ತು. ಬಸ್ ಫ್ರೀ ಅಂತ ಹೇಳಿ ಆ ಹಣವನ್ನು ksrtc ಗೆ ಕೊಡ್ತಿದ್ದಾರೆ. ಕೂಡಲೇ ಆ ಹಣವನ್ನು ದಲಿತರ ಕಲ್ಯಾಣಕ್ಕೆ ಬಳಸಬೇಕು ಎಂದರು.

Leave a Reply

Your email address will not be published. Required fields are marked *

You missed

error: Content is protected !!