• Thu. Sep 28th, 2023

PLACE YOUR AD HERE AT LOWEST PRICE

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಮತ್ತೊಮ್ಮೆ ಆದೇಶಿಸಿದೆ.

ನವದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಸೋಮವಾರ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನಿತ್ಯ ಐದು ಸಾವಿರ ಕ್ಯೂಸೆಕ್‌ ನೀರು ಹರಿಸಲು ಕರ್ನಾಟಕ್ಕೆ ಸೂಚಿಸಲಾಗಿದೆ. ಮುಂದುವರಿದು, ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆ ಮಾಡಲೇಬೇಕು ಎಂದು ಸಭೆಯಲ್ಲಿ ಖಡಕ್‌ ಆಗಿ ಸೂಚಿಸಿದೆ.

ಈ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಈ ಹಿಂದೆ ನೀಡಿದ್ದ ಇದೇ ಆದೇಶವನ್ನು ಈಗ ಮತ್ತೊಮ್ಮೆ ಪುನರ್‌ ಉಚ್ಚರಿಸಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕು.

Leave a Reply

Your email address will not be published. Required fields are marked *

You missed

error: Content is protected !!