• Fri. May 3rd, 2024

PLACE YOUR AD HERE AT LOWEST PRICE

ಬೆಂಗಳೂರು:ಚುನಾವಣೆಗೆ 20 ಕ್ಷೇತ್ರಗಳ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್‌ ಆಪರೇಷನ್‌ ಹಸ್ತದ ಮೂಲಕ ಅಸಮಾಧಾನಿತ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರನ್ನ ಸೆಳೆಯುತ್ತಿದ್ದು, ಇತ್ತ ಕಾಂಗ್ರೆಸ್‌ ಪಾಳಯದಲ್ಲೇ ಮತ್ತಷ್ಟು ಉಪಮುಖ್ಯಮಂತ್ರಿಗಳ ನೇಮಕದ ಕುರಿತು ಸಚಿವ ಕೆ ಎಸ್‌ ರಾಜಣ್ಣ ಅವರ ಹೇಳಿಕೆ ಸಾಕಷ್ಟು ಸಂಚಲನ ಸೃಷ್ಠಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್‌, ‌ ಲಿಂಗಾಯತ, ಎಸ್‌ಸಿ, ಎಸ್‌ಟಿ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಪತ್ರ ಬರೆಯಲು ನಿರ್ಧರಿಸಿದ್ದೇನೆ ಎಂದು ಸಚಿವ ಕೆ ಎನ್‌ ರಾಜಣ್ಣ ಹೇಳಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು.

ಈ ಹಿಂದೆ ವಿಧಾನಸಭೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿದ್ದೆವು, ಈಗ ಲೋಕಸಭಾ ಚುನಾವಣೆಗೂ ಹೆಚ್ಚಿನ ಸ್ಥಾನಗಳನ್ನ ಗೆಲ್ಲಬೇಕಾದರೆ ಮತ್ತೆ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಪಕ್ಷಕ್ಕೆ ಲಾಭವಾಗಲಿದೆ ಎಂದು ಹೇಳಿದ್ರು.

ಇನ್ನೂ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿ ಮಾಡಬೇಕು ಎಂದು ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ. ಆದರೆ, ಈ ಬಗ್ಗೆ ಹೈಕಮಾಂಡ್‌ ನಿರ್ಧಾರ ಕೈಗೊಳ್ಳಬೇಕಲ್ವೇ? ಎಂದು ಪ್ರಶ್ನಿಸಿದ ಅವರು, ಈ ವಿಚಾರದಲ್ಲಿ ನನಗೇನಿಲ್ಲ. ಹೈಕಮಾಂಡ್‌ ಏನು ಹೇಳುತ್ತೋ ಅದನ್ನು ಮಾಡುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಬೇಕೆಂದು ಸಚಿವ ಕೆ ಎನ್‌ ರಾಜಣ್ಣ ಅವರು ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆಯುವುದಾಗಿ ಹೇಳಿರುವ ವಿಚಾರವಾಗಿ ಮಾತನಾಡಿ, ಸಂಪುಟದಲ್ಲಿ ಈಗಾಗಲೇ ಒಬ್ಬರು ಉಪಮುಖ್ಯಮಂತ್ರಿ ಇದ್ದಾರೆ. ಆದರೆ, ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್‌ ಜೊತೆ ಮಾತನಾಡುತ್ತೀನಿ ಅಂತಲೂ ಹೇಳಿದ್ದಾರೆ.

ಹೈಕಮಾಂಡ್‌ ಏನು ಹೇಳುತ್ತೋ ಅದನ್ನು ಮಾಡುತ್ತೇನೆ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಉತ್ತಮ ಸಾಧನೆ ಮುಂದುವರಿಸಲು ಇನ್ನೂ ಮೂರು ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು . ಇದೇ ವೇಳೆ ರಾಜಣ್ಣ ಅವರನ್ನು ಬೆಂಬಲಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಒಳ್ಳೆಯ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದ್ದರು.

ಅವರ ಉದ್ದೇಶಗಳು ಉತ್ತಮವಾಗಿವೆ ಮತ್ತು ಅವರು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಿದ್ದಾರೆ. ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಹೈಕಮಾಂಡ್‌ಗೆ ಸೂಚಿಸಿದ್ದಾರೆ. ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ನಿರ್ಧಾರ ಕೈಗೊಳ್ಳುವುದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಉಪ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಪರಮೇಶ್ವರ್‌ ಹೇಳಿದರು.

ಈ ವಿಚಾರ ಒಕ್ಕಲಿಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದ್ದು, ಹೈಕಮಾಂಡ್ ಜತೆ ಮಾತನಾಡಿ ಸಮಸ್ಯೆಗೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ. ಸರ್ಕಾರ ರಚನೆ ವೇಳೆ ಶಿವಕುಮಾರ್ ಮಾತ್ರ ಉಪ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!