• Fri. May 3rd, 2024

PLACE YOUR AD HERE AT LOWEST PRICE

ಇಂದಿನಿಂದ ಸಂಸತ್ತಿನ :ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ.

ಇಂದಿನಿಂದ(ಸೆ.18) ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಇಂದು ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, “ಕಾಶ್ಮೀರದಲ್ಲಿ ಹುತಾತ್ಮರಾದ ಸೇನೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಾಳೆಯಿಂದ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದೆ. ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ.

ಮೊದಲ ದಿನ ಹಳೆ ಸಂಸತ್ ಭವನದಲ್ಲಿ ಅಧಿವೇಶನ ನಡೆಯಲಿದೆ. ಮರುದಿನ ಅಂದರೆ ಸೆ.19ರಂದು ಹಳೆ ಸಂಸತ್ ಭವನದಲ್ಲಿ ಫೋಟೋ ಸೆಷನ್, ನಂತರ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಅದರ ನಂತರ ನಾವು ಹೊಸ ಸಂಸತ್ತಿಗೆ ಪ್ರವೇಶಿಸುತ್ತೇವೆ” ಎಂದು ಮಾಹಿತಿ ನೀಡಿದರು.

 

ಸೆ.18ರಂದು ಹಳೆಯ ಸಂಸತ್ತಿನಲ್ಲಿ ಅಧಿವೇಶನ ನಡೆದರೆ, ಸೆ.19 ರಂದು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ. 20ರಿಂದ ಸಾಮಾನ್ಯ ಸರ್ಕಾರಿ ಕೆಲಸಗಳು ಹೊಸ ಸಂಸತ್ ಭವನದಲ್ಲಿ ಪ್ರಾರಂಭವಾಗುತ್ತವೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.

ಸೋಮವಾರದಿಂದ ಐದು ದಿನಗಳ ಕಾಲ ಕೇಂದ್ರ ಸರ್ಕಾರ ಕರೆದಿರುವ ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಕೆರಳಿಸಿರುವಂತೆಯೇ, ಎಲ್ಲ ಪಕ್ಷಗಳಿಂದ ಅಭಿಪ್ರಾಯ, ಸಲಹೆಗಳನ್ನು ಪಡೆಯಲು ಭಾನುವಾರ ಸಂಜೆ ಸರ್ವ ಪಕ್ಷ ನಾಯಕರೊಂದಿಗೆ ಸಭೆಯನ್ನು ಆಯೋಜಿಸಲಾಗಿತ್ತು.

‘ಸಂವಿಧಾನ ಸಭೆ’ಯಿಂದ ಆರಂಭಿಸಿ ಸಂಸತ್ತಿನ 75 ವರ್ಷಗಳ ಪಯಣ ಕುರಿತ ವಿಶೇಷ ಚರ್ಚೆಯೇ ಸರ್ಕಾರ ಪಟ್ಟಿ ಮಾಡಲಾದ ಪ್ರಮುಖ ಅಜೆಂಡಾವಾದರೂ ಸಾಮಾನ್ಯವಾಗಿ ಅಧಿವೇಶನ ಇಲ್ಲದೆ ಬೇರೆ ಸಂದರ್ಭದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನ ಅಚ್ಚರಿಗೆ ಕಾರಣವಾಗಿದೆ.

ವಿಶೇಷ ಅಧಿವೇಶನದ ಮುನ್ನಾದಿನವಾದ ಭಾನುವಾರದಂದು ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಧ್ವಜಾರೋಹಣ ಮಾಡಿದ್ದಾರೆ. ಅಲ್ಲದೇ, ವಿಶೇಷ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳ ಸಿಬ್ಬಂದಿಗೆ ಹೊಸ ಸಮವಸ್ತ್ರವನ್ನು ಈಗಾಗಲೇ ವಿತರಿಸಲಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!