• Tue. Oct 22nd, 2024

PLACE YOUR AD HERE AT LOWEST PRICE

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಂಗಳವಾರ(ಸೆ.19) ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷಿತ ಕಾನೂನಿಗೆ ಕಾಂಗ್ರೆಸ್ ಬದ್ಧವಾಗಿದೆ, ಅಲ್ಲದೆ ‘ಈ ಮಸೂದೆ ನಮ್ಮದು’ ಎಂದು ತಿಳಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯ ಮಹತ್ವದ ಜಂಟಿ ಅಧಿವೇಶನಕ್ಕಾಗಿ ಸಂಸತ್ತಿಗೆ ಪ್ರವೇಶಿಸಿದ ಸೋನಿಯಾ ಗಾಂಧಿ, ಮಹಿಳಾ ಮೀಸಲಾತಿ ಮಸೂದೆಯು ತಮ್ಮ ಪಕ್ಷದ ಉಪಕ್ರಮವಾಗಿದೆ ಮತ್ತು ಅಂತಿಮವಾಗಿ ಅದನ್ನು ಮಂಡಿಸುತ್ತಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದರು.

ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಉದ್ದೇಶ ಹೊಂದಿರುವ ಐತಿಹಾಸಿಕ ಮಸೂದೆಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಯನ್ನು 2010 ರಲ್ಲಿ ರಾಜ್ಯಸಭೆ ಅಂಗೀಕರಿಸಿತ್ತು. ಆದರೆ ಲೋಕಸಭೆಯಲ್ಲಿ ಅಂಗೀಕರಿಸಲು ಸಾಧ್ಯವಾಗದ ಕಾರಣ ಮಸೂದೆ ಬಿದ್ದುಹೋಗಿತ್ತು.

ಆದಷ್ಟು ಬೇಗ ಮಸೂದೆಯನ್ನು ಅಂಗೀಕರಿಸಬೇಕು ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸರ್ಕಾರವನ್ನು ಒತ್ತಾಯಿಸಿದರು. ಯುಪಿಎ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಸೂದೆಗಾಗಿ ಬೇಡಿಕೆಯನ್ನು ಮಂಡಿಸಿದ್ದರು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಸಂಪುಟದ ನಿರ್ಧಾರವನ್ನು ಸ್ವಾಗತಿಸಿದ್ದು, ತಮ್ಮ ಪಕ್ಷವು ಮಸೂದೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಬಹಳ ದಿನಗಳಿಂದ ಆಗ್ರಹಿಸಲಾಗುತ್ತಿದೆ ಎಂದು ಹೇಳಿದರು.

ವಿಶೇಷ ಅಧಿವೇಶನಕ್ಕೂ ಮುನ್ನವೇ ಸರ್ವಪಕ್ಷ ಸಭೆಯಲ್ಲಿ ಮಸೂದೆ ಕುರಿತು ಚರ್ಚೆ ನಡೆಸಿ ತೆರೆಮರೆಯ ರಾಜಕಾರಣದ ಬದಲು ಒಮ್ಮತಕ್ಕೆ ಬರಬಹುದಿತ್ತು ಎಂದು ಹೇಳಿದ್ದಾರೆ.

ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾದ ಸ್ಥಾನಗಳು ಸೇರಿದಂತೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಮಸೂದೆಯು ಪ್ರಸ್ತಾಪಿಸುತ್ತದೆ. ಮೀಸಲಾತಿಯನ್ನು ಸಂಸತ್ತು ಸೂಚಿಸುವ ಪ್ರಾಧಿಕಾರದಿಂದ ನಿರ್ವಹಿಸಲಾಗುತ್ತದೆ.

ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಿಳೆಯರಿಗೆ ಶಾಸಕಾಂಗ ಮೀಸಲಾತಿ ಒದಗಿಸುವ ಮಸೂದೆಯನ್ನು ಅಂಗೀಕರಿಸಲು ಕಾಂಗ್ರೆಸ್​​ ಬೇಷರತ್ತಾದ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಇದರ ಜತೆಗೆ ಪ್ರಧಾನಿ ಮೋದಿ ಅವರಿಗೆ ರಾಹುಲ್​​​ ಗಾಂಧಿ ಅವರು ಬರೆದಿರುವ ಹಳೆಯ ಪತ್ರದ ಬಗ್ಗೆಯು ಪ್ರಸ್ತಾಪಿಸಿದ್ದಾರೆ.

“ನಮ್ಮ ಪ್ರಧಾನಿ ಅವರು ಮಹಿಳಾ ಸಬಲೀಕರಣಕ್ಕಾಗಿ ಹೋರಾಡುವೇ ಎಂದು ಹೇಳುತ್ತಾರೆ? ಅವರ ಪಕ್ಷ ಮೇಲೆ ಬರಲು ಮಹಿಳೆಯರೇ ಕಾರಣ, ಇದೀಗ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವ ಮೂಲಕ ಅವರಿಗೆ ಸೇವೆ ಸಲ್ಲಿಸಲು ಒಂದು ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಈ ನಡುವೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿಗೆ ಬರೆದ ಪತ್ರವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಹಳೆಯ ಪತ್ರದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮಸೂದೆಯನ್ನು ಅಂಗೀಕರಿಸಲು ಕಾಂಗ್ರೆಸ್ ನಾಯಕರಿಂದ “ಬೇಷರತ್ತಾದ ಬೆಂಬಲ” ಕುರಿತು ತಿಳಿಸಲಾಗಿದೆ. ಈ ಪತ್ರ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

“ನಮ್ಮ ಪ್ರಧಾನಿ ಅವರು ಮಹಿಳಾ ಸಬಲೀಕರಣಕ್ಕಾಗಿ ಹೋರಾಟಗಾರರಾಗಿದ್ದಾರೆ ಎಂದು ಹೇಳುತ್ತಾರೆ? ಅವರು ಪಕ್ಷ ರಾಜಕೀಯವಾಗಿ ಮೇಲೇರಲು ಮತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವ ಸಮಯ ಬಂದಿದೆ. ಕಾಂಗ್ರೆಸ್ ಅವರಿಗೆ ತನ್ನ ಬೇಷರತ್ ಬೆಂಬಲವನ್ನು ನೀಡುತ್ತದೆ. ಮಹಿಳಾ ಸಬಲೀಕರಣದ ವಿಷಯದಲ್ಲಿ, ನಾವು ಒಟ್ಟಾಗಿ ನಿಲ್ಲೋಣ, ಪಕ್ಷ ರಾಜಕೀಯಕ್ಕಿಂತ ಮೇಲೇರೋಣ” ಎಂದು 2018ರಲ್ಲಿ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ಮಹಿಳೆಯರ ಶಾಸಕಾಂಗ ಮೀಸಲಾತಿಗಾಗಿ ಕಾನೂನನ್ನು ರೂಪಿಸಲು 1996ರಿಂದ ಹಲವಾರು ಪ್ರಯತ್ನಗಳನ್ನು ಮಾಡಲಾಗಿತ್ತು. ಆದರೆ ಕೆಲವೊಂದು ಸಮಸ್ಯೆಗಳಿಂದ ಅದನ್ನು ಅಂಗೀಕರಣ ಮಾಡಲು ಸಾಧ್ಯವಾಗಿರಲಿಲ್ಲ. 2010ರಲ್ಲಿ ಯುಪಿಎ ಸರ್ಕಾರವು ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವಲ್ಲಿ ಯಶಸ್ವಿಯಾಯಿತು. ಆದರೆ ಮಿತ್ರಪಕ್ಷಗಳ ಕೆಲವು ಒತ್ತಡದಿಂದಾಗಿ ಲೋಕಸಭೆಯಲ್ಲಿ ಅದನ್ನು ಮಂಡಿಸಲು ಸಾಧ್ಯವಾಗಿರಲಿಲ್ಲ.

Related Post

ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ನೀಡಿದ್ದಾರೆ. ಆದರೆ,‌ ರಾಜೀನಾಮೆ ನೀಡಲು ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ : ಮಾಜಿ ಸಂಸದ ಎಸ್.ಮುನಿಸ್ವಾಮಿ
ನಾವು ಆಸೆಗಳಿಗೆ ಮಿತಿಯಿಲ್ಲದೆ ಬದುಕುತ್ತೇವೆ,ಸಮಾಜಕ್ಕೆ ಒಂದಷ್ಟು ಕೊಡುಗೆಯಾಗಿ ನೀಡಿದಾಗ ನಮ್ಮ ಜನ್ಮ ಸಾರ್ಥಕವಾಗುತ್ತದೆ: ಶಿಕ್ಷಕ ಕೆ.ಹೆಚ್.ಸಂಪತ್ ಕುಮಾರ್
ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ: ನರಸಿಂಹಯ್ಯ 

Leave a Reply

Your email address will not be published. Required fields are marked *

You missed

error: Content is protected !!