• Mon. Apr 29th, 2024

PLACE YOUR AD HERE AT LOWEST PRICE

ಬೆಂಗಳೂರು;ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಕೆಲವು ದಿನಗಳ ಹಿಂದೆ ಬಡ್ತಿ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪಿಡಿಒಗಳು ಅಸಮಾಧಾನ ವ್ಯಕ್ತಪಡಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದೆ. ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆಯುಕ್ತರು ಪಿಡಿಒಗಳ ಸೇವಾ ನಿರ್ವಹಣೆ ಬಗ್ಗೆ ಪ್ರಮುಖ ಪ್ರಾಧಿಕಾರ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ಆಯುಕ್ತಾಲಯದ ಆಯುಕ್ತರು ಪ್ರಾಧಿಕಾರಿ ಆಗಿರುತ್ತಾರೆ.

ಆದೇಶದ ವಿವರ; ಪಿಡಿಒಗಳಿಗೆ ಲಘು ಮತ್ತು ಕಠಿಣ ದಂಡನೆ ವಿಧಿಸಲು, ಕಾಲಬದ್ಧ ವೇತನ ಬಡ್ತಿ ಮಂಜೂರಾತಿ, ಪರೀಕ್ಷಾರ್ಥ ಅವಧಿ ಘೋಷಣೆ ಮತ್ತು ಸೇವಾ ವಿಷಯ ನಿರ್ವಹಣೆ ಮಾಡಲು ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ ಎಂದು ಆದೇಶ ಹೇಳಿದೆ.

ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ, ಸರ್ಕಾರವನ್ನು ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರವನ್ನಾಗಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಪಂಚಾಯತ್ ರಾಜ್ ಇಲಾಖೆ ಆಯುಕ್ತರನ್ನು ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರವನ್ನಾಗಿ ನೇಮಿಸಲಾಗಿದೆ.

ಸುತ್ತೋಲೆಯಲ್ಲಿ ಸೇವಾ ವಿಷಯ, ಕಾಯಂ ಪೂರ್ವ ಅವಧಿ ಘೋಷಣೆ, ಬಡ್ತಿ, ಮನೆ, ನಿವೇಶನ, ವಾಹನ ಖರೀದಿ ಅನುಮತಿ, ಸಾಲ ಮಂಜೂರಾತಿ, ಒಪ್ಪಿಗೆ ಪತ್ರ, ಜಿಪಿಎಫ್ ಸಾಲ ಮಂಜೂರಾತಿ, ಮುಂತಾದ ವಿಚಾರಗಳು ಪ್ರಾಧಿಕಾರದ ವ್ಯಾಪ್ತಿಗೆ ಬರಲಿವೆ ಎಂದು ತಿಳಿಸಿದೆ. ಕೆಲವು ದಿನಗಳ ಹಿಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಿಡಿಒಗಳು ಸರ್ಕಾರವನ್ನು ಆಗ್ರಹಿಸಿದ್ದರು.

ಬೇಡಿಕೆ ಈಡೇರಿಸಿಲ್ಲ ಎಂದರೆ ಸೆಪ್ಟೆಂಬರ್ 14ರಿಂದ ಮುಷ್ಕರ ನಡೆಸಲಾಗುತ್ತದೆ ಎಂದು ಹೇಳಿದ್ದರು. ಬಳಿಕ ಕರ್ನಾಟಕ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ವಾರದ ಮಾತನಾಡಿ, “ಸಚಿವ ಪ್ರಿಯಾಂಕ್ ಖರ್ಗೆಯವರು ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಬೇಡಿಕೆ ಈಡೇರಿಸುವ ನಿರೀಕ್ಷೆಯಿರುವ ಕಾರಣ ಉದ್ದೇಶಿತ ಅಸಹಕಾರ ಚಳವಳಿ ಕೈ ಬಿಟ್ಟಿದ್ದೇವೆ” ಎಂದು ಹೇಳಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಇಲಾಖೆಯ ಉನ್ನತ ಅಧಿಕಾರಿಗಳು, ಪಿಡಿಒಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದರು. “ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಯತ್ನಿಸುವೆ. ಗ್ರಾಮೀಣ ಪ್ರದೇಶದ ಜನರ ಕ್ಷೇಮಾಭ್ಯುದಯಕ್ಕೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕೆಲಸ ಮಾಡಿದರೆ ಸರ್ಕಾರವು ಹೆಚ್ಚು ಮುತುವರ್ಜಿವಹಿಸಲಿದೆ” ಎಂದು ಭರವಸೆ ನೀಡಿದ್ದರು.

ಪಿಡಿಒಗಳು ಕೆಲವು ದಿನಗಳ ಹಿಂದೆ ಇಲಾಖಾ ವಿಚಾರಣೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ರಜಾದಿನಗಳಲ್ಲಿ ಕರ್ತವ್ಯ ನಿರ್ವಹಿಸುವಂತೆ ಸಿಇಒ ಹಾಗೂ ಇಒಗಳು ಆದೇಶ ಮಾಡುವುದನ್ನು ತಡೆಯಬೇಕು. ಕರ್ತವ್ಯ ಅವಧಿ ಹೊರತುಪಡಿಸಿ ಸಭೆ ಮಾಡಬಾರದು. ಯೋಜನೆಗಳಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಾರ್ವಜನಿಕರು ನೀಡುವ ದಾಖಲೆರಹಿತ ದೂರುಗಳನ್ನು ವಿಚಾರಣೆಗೆ ಎತ್ತಿಕೊಂಡು ಹಿಂಸೆ ನೀಡುವುದು ನಿಲ್ಲಿಸಬೇಕು. ಪಂಚತಂತ್ರ ತಂತ್ರಾಶ ಹಾಗೂ ಅಪ್ಲಿಕೇಶನ್‌ನಲ್ಲಿನ ದೋಷಗಳನ್ನು ಸರಿಪಡಿಸಬೇಕು ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು.

ಪಿಡಿಒಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಗೆ ಒಳಪಡುತ್ತಾರೆ. ಗ್ರಾಮೀಣ ಮಟ್ಟದಲ್ಲಿ ಕೆಲಸಗಳು ಬೇಗ ಆಗುತ್ತಿಲ್ಲ ಎಂಬ ಆರೋಪಗಳ ಹಿನ್ನಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪಿಡಿಒ ಖಾಲಿ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತಾಲಯದ ನಿರ್ದೇಶಕರು ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖಾಲಿ ಇರುವ ಪಿಡಿಒ, ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1), ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ಮಾಹಿತಿ ಸಂಗ್ರಹ ಮಾಡಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!