• Mon. Apr 29th, 2024

PLACE YOUR AD HERE AT LOWEST PRICE

ಕಾವೇರಿ ನದಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಮಸ್ಯೆ ಮತ್ತೆ ಭುಗಿಲೆದ್ದಿದೆ. ಈ ಬಾರಿ ಕರ್ನಾಟಕದಲ್ಲಿ ಮಳೆಯಾಗಿಲ್ಲ. ಬರದ ವಾತಾವರಣ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ತಮಿಳುನಾಡಿಗೆ ನೀರು ಹರಿಸಬೇಕು ಅನ್ನೋ ನಿರ್ಧಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಬೇರೆ ಬೇರೆ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲವನ್ನು ಸೂಚಿಸುತ್ತಿವೆ. ಈ ಹಿನ್ನೆಲೆಯಲ್ಲಿಯೇ ಕಾವೇರಿ ವಿವಾದ ಭುಗಿಲೆದ್ದಿರುವ ಈ ಸಂದರ್ಭದಲ್ಲಿ ಕನ್ನಡದ ನಟರು ಮೌನಕ್ಕೆ ಶರಣಾಗಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿತ್ತು.

ಕೆಲವು ಸಂಘಟನೆಗಳು ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ಕೂಡ ಮಾಡಿದ್ದಾರೆ. ಇದೇ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿ ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಕಾವೇರಿ ನೀರಿಗೆ ಕತ್ತರಿ ಹಾಕುವ ಪ್ರಯತ್ನ ನಡೆದಿದೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾವೇರಿ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ರೈತರ ಹೋರಾಟಕ್ಕೆ ದರ್ಶನ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಆ ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

“ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ.” ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

Darshan Thoogudeepa (@dasadarshan) / X (twitter.com)

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!