• Sat. Apr 27th, 2024

PLACE YOUR AD HERE AT LOWEST PRICE

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನಿರ್ಮಾಪಕ ಎನ್‌. ಎಮ್ ಸುರೇಶ್ ಚುನಾಯಿತರಾಗಿದ್ದಾರೆ. ಇಂದು(ಸೆಪ್ಟೆಂಬರ್ 23) ಫಿಲ್ಮ್ ಚೇಂಬರ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೀತು. ಚುನಾವಣೆ ಬಳಿಕ ಮತ ಎಣಿಕೆಯಾಗಿದ್ದು ಇದೀಗ ಫಲಿತಾಂಶ ಹೊರಬಿದ್ದಿದೆ.

ಚುನಾವಣೆಗೆ ಒಟ್ಟು 1638 ಮಂದಿಗೆ ಮತದಾನ ಮಾಡುವ ಅರ್ಹತೆ ಇತ್ತು. ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಮತಗಳು 1599 ಪೈಕಿ 967 ಮತಗಳು ಚಲಾವಣೆ ಆಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಎನ್‌. ಎಂ ಸುರೇಶ್, ವಿತರಕ ಹಾಗೂ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್, ವಿತರಕರಾದ ಎ. ಗಣೇಶ್ ಮತ್ತು ವಿತರಕ ಮಾರ್ಸ್ ಸುರೇಶ್ ನಡುವೆ ಪೈಪೋಟಿ ನಡೆದಿತ್ತು. ಅಂತಿಮವಾಗಿ ಎನ್‌. ಎಂ ಸುರೇಶ್ ಗೆಲುವಿನ ನಗೆ ಬೀರಿದ್ದಾರೆ.

ಚಲಾವಣೆ ಆದ ಮತಗಳ ಪೈಕಿ ಶಿಲ್ಪಾ ಶ್ರೀನಿವಾಸ್‌ಗೆ 217, ವಿ.ಹೆಚ್.ಸುರೇಶ್‌ಗೆ ( ಮಾರ್ಸ್ ಸುರೇಶ್) 181, ನಿರ್ಮಾಪಕ ಎ.ಗಣೇಶ್‌ಗೆ 204 ಮತಗಳು ಬಿದ್ದಿವೆ. 337 ಮತಗಳನ್ನು ಪಡೆದು ಎನ್.ಎಮ್ ಸುರೇಶ್ ಗೆಲುವು ಸಾಧಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!