ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ನಮ್ಮ ಕೋಲಾರ
ಬಂಗಾರಪೇಟೆ
ಮಕ್ಕಳ ಸುದ್ದಿ
ಮಾಲೂರು
ಮುಳಬಾಗಿಲು
ಶಿಕ್ಷಣ
ಶ್ರೀನಿವಾಸಪುರ
PLACE YOUR AD HERE AT LOWEST PRICE
ರಾಜ್ಯಾದ್ಯಂತ ಅಕ್ಟೋಬರ್ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 100 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.27ರಂದು ಧಾರವಾಡ, ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಹಾಗಾಗಿ, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಸೆ.29ರಿಂದ ಅ.1 ರವರೆಗೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೋಲಾರ ಮತ್ತು ಬೆಂಗಳೂರು ಮಳೆ ಆಗುತ್ತಿದೆ. ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಈ ವಾತಾವರಣ ಇನ್ನು ಒಂದು ವಾರ ಮುಂದುವರೆಯಲಿದೆ ಎಂದು ಹೇಳಿದೆ.