• Mon. May 6th, 2024

PLACE YOUR AD HERE AT LOWEST PRICE

ಬಾಗ್ದಾದ್:ಇರಾಕ್‌ನ ಹಮ್ದನಿಯಾಹ್ ಪಟ್ಟಣದಲ್ಲಿರುವ ಮದುವೆ ಮಂಟಪವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ಮದುವೆ ಸಂದರ್ಭದಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. 150 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಬುಧವಾರ ಮುಂಜಾನೆ ಮಾಹಿತಿ ನೀಡಿದ್ದಾರೆ.

ನಿನೆವೆ ಪ್ರಾಂತ್ಯದ ಆರೋಗ್ಯ ಅಧಿಕಾರಿಗಳು ಪ್ರಕಾರ, ‘ಹಮ್ದನಿಯಾದ ಮದುವೆ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಕನಿಷ್ಠ 100 ಜನರು ಪ್ರಾಣ ಕಳೆದುಕೊಂಡಿದ್ದಾರೆ. 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮೊಸುಲ್‌ನ ಪೂರ್ವದಲ್ಲಿರುವ ಕ್ರಿಶ್ಚಿಯನ್ನರು ಹೆಚ್ಚು ವಾಸಿಸುವ ಪಟ್ಟಣವಾದ ಹಮ್ದನಿಯಾದದಲ್ಲಿ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಹಲವಾರು ಆಂಬ್ಯುಲೆನ್ಸ್‌ಗಳು ಸೈರನ್‌ಗಳೊಂದಿಗೆ ಆಸ್ಪತ್ರೆಗೆ ಆಗಮಿಸುತ್ತಿದ್ದು, ರಕ್ತದಾನ ಮಾಡಲು ಆಸ್ಪತ್ರೆಯ ಅಂಗಳದಲ್ಲಿ ನೂರಾರು ಜನರು ಸೇರಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಹೇಳಿದ್ದಾರೆ.

ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ನಾಗರಿಕ ರಕ್ಷಣಾ ಅಧಿಕಾರಿಗಳು ಬೆಂಕಿಯು ಸಂಭವಿಸಿದ ಈವೆಂಟ್ ಹಾಲ್‌ನೊಳಗೆ ಪರಿಶೀಲನೆ ನಡೆಸುತ್ತಿದ್ದಾರೆ. ಈವೆಂಟ್‌ ಹಾಲ್‌ ಸಿಬ್ಬಂದಿ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆದರೆ, ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆಯೇ ಎಂಬುದನ್ನು ತನಿಖೆ ಮೂಲಕ ತಿಳಿದುಕೊಳ್ಳಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕಡಿಮೆ ವೆಚ್ಚದ, ಕಳಪೆ ಗುಣಮಟ್ಟದ ನಿರ್ಮಾಣ ಸಾಮಗ್ರಿಗಳ ಬಳಕೆಯಿಂದಾಗಿ ಬೆಂಕಿಯು ಚಾವಣಿಯ ಮೂಲಕ ಹೊತ್ತಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಪ್ರಾಥಮಿಕ ಮಾಹಿತಿಯೊಂದರ ಪ್ರಕಾರ, ಮದುವೆಯ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಿಡಿಗಳು ಚಾವಣಿಯ ಮೂಲಕ ಸಭಾಂಗಣದಲ್ಲಿ ಸಿಡಿದ ಕಾರಣ ಬೆಂಕಿ ಹೊತ್ತಿಕೊಂಡಿದೆ. ಇರಾಕ್‌ನ ನಿರ್ಮಾಣ ಮತ್ತು ಸಾರಿಗೆ ವಲಯಗಳಲ್ಲಿನ ಸುರಕ್ಷತಾ ಮಾನದಂಡಗಳನ್ನು ಈ ಮದುವೆ ಹಾಲ್‌ನಲ್ಲಿ ಕಡೆಗಣಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವಾಲಯದ ವಕ್ತಾರ ಸೈಫ್ ಅಲ್-ಬದ್ರ್, ‘ಸರ್ಕಾರಿ ನ್ಯೂಸ್‌ ಏಜೆನ್ಸಿಯ ನಮಗೆ ನೀಡಿರುವ ಮಾಹಿತಿಯ ಪ್ರಕಾರ, ಘಟನೆಯಲ್ಲಿ ನೂರು ಜನರು ಸಾವನ್ನಪ್ಪಿದ್ದು, ಗಾಯಗೊಂಡವರ ಸಂಖ್ಯೆಯನ್ನು 150ಕ್ಕೆ ಏರಿದೆ’ ಎಂದು ತಿಳಿಸಿದ್ದಾರೆ.

‘ದುರದೃಷ್ಟಕರ ಅವಘಡದಲ್ಲಿ ಹಾನಿಗೊಳಗಾದವರಿಗೆ ಪರಿಹಾರವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ’ ಎಂದು ಅಲ್-ಬದ್ರ್ ಹೇಳಿದ್ದಾರೆ.

ಇರಾಕ್‌ನ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಬೆಂಕಿಯ ಅಪಘಾತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ. ದೇಶದ ಆಂತರಿಕ ಮತ್ತು ಆರೋಗ್ಯ ಅಧಿಕಾರಿಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದ್ದಾರೆ.

‘ಕಡಿಮೆ ವೆಚ್ಚದ ಕಟ್ಟಡ ಸಾಮಗ್ರಿಗಳ ಬಳಕೆಯ ಪರಿಣಾಮವಾಗಿ ಈ ದುರಂತ ಸಂಭವಿಸಿದೆ. ಬೆಂಕಿಯು ಹಾಲ್‌ನ ಗೋಡೆಗಳ ಕುಸಿತಕ್ಕೆ ಕಾರಣವಾಯಿತು. ಬೆಂಕಿ ಹೊತ್ತಿಕೊಂಡ ಕೆಲ ನಿಮಿಷಗಳಲ್ಲಿ ಗೋಡೆಗಳು ಕುಸಿದಿವೆ’ ಎಂದು ನಾಗರಿಕ ರಕ್ಷಣಾ ಇಲಾಖೆ ಹೇಳಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!