• Sat. May 4th, 2024

PLACE YOUR AD HERE AT LOWEST PRICE

ಕೋಲಾರ:ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ನೀಡಬೇಕಾದ ಕೆಲವು ಸೌಲಭ್ಯಗಳನ್ನು ನೀಡದ ಕಾರಣಕ್ಕೆ ಕೋಲಾರದ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ವಿದ್ಯಾರ್ಥಿಗಳಿಂದಮೌನ ಪ್ರತಿಭಟನೆನಡೆಸಲಾಯಿತು.

ಈ ಪ್ರತಿಭಟನೆ ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ. ಕುಮುದ ಡಿ ಅವರು ಬಂದು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು. ಆದರೆ ಅವರ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಹೇಳಿದರು.

ವಿದ್ಯಾರ್ಥಿಗಳ ಕುಂದು ಕೊರತೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಕಾರಣದಿಂದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ನಿರಂಜನ ವಾನಳ್ಳಿ ಯವರು ಬರಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಆ ಬಳಿಕೆ ಪ್ರತಿಭಟನಾ ಸ್ಥಳಕ್ಕೆ ಕುಲಪತಿಗಳು ಭೇಟಿ ನೀಡಿದರು. ಈ ವೇಳೆ ಅವರಿಂದಲೂ ಸಹ ಸೂಕ್ತವಾದ ಮಾಹಿತಿಯಾಗಲಿ, ಭರವಸೆಯಾಗಲಿ ನೀಡದ ಕಾರಣ ಪ್ರತಿಭಟನೆಯು ಮುಂದುವರೆಯಿತು.

ವಿಶ್ವವಿದ್ಯಾಲಯದ ಮೌಲ್ಯಮಾಪಕರಾದ ಡಿ ಡೊಮಿನಿಕ್ ಅವರು ಮನವಿ ಪತ್ರವನ್ನು ಪಡೆದರು. ಆ ಬಳಿಕ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಮಾತನಾಡಿ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದೆಂದು ಬಾಯಿ ಮಾತಿನಲ್ಲಿ ಹೇಳಿದರು. ಆದರೆ ಯಾವುದೇ ರೀತಿಯ ಲಿಖಿತ ರೂಪದಲ್ಲಿ ಭರವಸೆಯನ್ನು ನೀಡದೇ ಇರುವುದು, ಈ ಮೌನ ಪ್ರತಿಭಟನೆಗೆ ಅರ್ಥವೇ ಇಲ್ಲದಂತಾಯಿತು ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳ ಕುರಿತು ಕ್ರಮ ಕೈಗೊಳ್ಳದೆ ಇದ್ದರೆ ಮುಂದೆ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳಿಗಳು ತಿಳಿಸಿದರು.

ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಕುಂದು ಕೊರತೆಗಳ ಕುರಿತು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಿಗೆ ಮನವಿ ಪತ್ರ ನೀಡಲಾಗಿದೆ.

  1. SC-ST ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ಕುರಿತು..
  2. SC-ST ಸೆಲ್‌ನ ವಿಚಾರದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯ ಕೊರತೆ.
  • TSP-SSP ಹಣದ ಮಾಹಿತಿ
  • ಲ್ಯಾಪ್‌ಟಾಪ್ ವಿತರಣೆ ಕುರಿತು
  • ಆರೋಗ್ಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ನೀಡಬೇಕಾದ ಸೌಲಭ್ಯ ಕುರಿತು
  1. ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿರುವಂತಹ SC-ST ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೀಡಬೇಕಾಗಿರುವ ಬೆಡ್ (ಹಾಸಿಗೆ) ಮತ್ತು ಇತರೆ ಸಾಮಗ್ರಿಗಳನ್ನು ಇಲ್ಲಿಯವರೆಗೆ ನೀಡದಿರುವುದು.
  2. NET-KSET ಪರೀಕ್ಷೆಗೆ ನೀಡಬೇಕಾಗಿರುವ ಪುಸ್ತಕಗಳನ್ನು ಇನ್ನೂ ನೀಡದಿರುವುದು.
  3. ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿರುವ SC-ST ವಿದ್ಯಾರ್ಥಿಗಳಿಗೆ ಸ್ಟೇ ಫಂಡ್ ನೀಡದಿರುವುದು.
  4. ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ಪುರುಷರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣದ ಕುರಿತು.

ಈ ಎಲ್ಲಾ ರೀತಿಯ ಸೌಲಭ್ಯಗಳನ್ನು ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ಸ್ನಾತಕೋತರ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ವಿದ್ಯಾರ್ಥಿಗಳು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!