ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಬಂಗಾರಪೇಟೆ:ತಾಲೂಕಿನ ಕೆಜಿಎಫ್ ರಸ್ತೆಯ ನೇರಳೆಕೆರೆ ಬಳಿ ಲಾರಿ ಹಿಂಬದಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ಧೀರಜ್ (21)ಎಂದು ಗುರುತಿಸಲಾಗಿದೆ. ಮೃತನು ಕೆಜಿಎಫ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.
ಮೃತನು ಚಿತ್ರದುರ್ಗದ ಡಿವೈಎಸ್ಪಿ ರವರ ಮಗ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಬೈಕ್ ನಲ್ಲಿ ಬರುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.
ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.