• Fri. May 3rd, 2024

PLACE YOUR AD HERE AT LOWEST PRICE

ಬಂಗಾರಪೇಟೆ:ತಾಲ್ಲೂಕು ಪಂಚಾಯಿತಿ ವ್ಯಾಪ್ತಿಗೆ ಸೇರಿದ ೨೧ ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ರೈತಸೇನೆ ವತಿಯಿಂದ ಇಓ ರವಿಕುಮಾರ್ ಅವರ ಮುಖಾಂತರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ದಲಿತ ರೈತಸೇನೆ ಸಂಸ್ಥಾಪಕ ಅಧ್ಯಕ್ಷ ಹುಣಸನಹಳ್ಳಿ ಎನ್.ವೆಂಕಟೇಶ್, ಪಂಚಾಯತ್ ರಾಜ್ ಕಾಯ್ದೆ ೧೯೯೩ರಂತೆ ಗ್ರಾಮ ಪಂಚಾಯಿತಿಗಳಲ್ಲಿ ಬರುವ ಅನುದಾನಗಳನ್ನು ಬಳಕೆ ಮಾಡಲು ವಾರ್ಡ್ ಸಭೆ, ಗ್ರಾಮ ಸಭೆ ಮತ್ತು ಸಾಮಾನ್ಯ ಸಭೆಯ ಅನುಮೋಧನೆಗಳನ್ನೊಳಗೊಂಡಂತೆ ಅನುಷ್ಠಾನಕ್ಕೆ ತರಲು ತಿಳಿಸಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳ ಕೈ ಗೊಂಬೆಗಳಂತೆ ಅವರ ತಾಳಕ್ಕೆ ತಕ್ಕಂತೆ ನಡೆದುಕೊಂಡು ಸರ್ಕಾರದ ಕಾಯ್ದೆ ಮತ್ತು ಆದೇಶಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಂಗಾರಪೇಟೆ ತಾಲ್ಲೂಕು ಪಂಚಾಯಿತಿಗೆ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಅವಧಿ ಮುಗಿಯುವ ಸಂದರ್ಭದಲ್ಲಿ ಅವ್ಯವಹಾರ ನಡೆದಿದೆ.

೧೫ನೇ ಹಣಕಾಸು ಹಾಗೂ ವರ್ಗ-೧ರ ಅನುಧಾನವನ್ನು ತರಾತುರಿಯಲ್ಲಿ ಯಾವುದೇ ಕ್ರಿಯಾ ಯೋಜನೆಯನ್ನು ತಯಾರು ಮಾಡದೇ ವಾರ್ಡ ಸಭೆ-ಗ್ರಾಮಸಭೆ ನಡೆಸದೇ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅನುಮೋದಿಸಿ ಹಣವನ್ನು ದುರುಪಯೋಗಪಡಿಸಿಕೊಂಡಿಸಿಕೊಂಡಿರುತ್ತಾರೆ. ಉದಾ: ಕೇತಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಬಿಲ್ಲುಗಳನ್ನು ಸೃಷ್ಠಿಸಿ ಸುಮಾರು ಲಕ್ಷಾಂತರ ರೂಗಳ ಹಣವನ್ನು ಅಧ್ಯಕ್ಷ ಹಾಗೂ ಪಿಡಿಓ ಸೇರಿಕೊಂಡಿ ಅವ್ಯವಹಾರ ನಡೆಸಿದ್ದಾರೆ.

ಈ ಬಗ್ಗೆ ಈಗಾಗಲೇ ಹಲವು ಮಾದ್ಯಮಗಳಲ್ಲಿ ಸುದ್ದಿಯಾಗಿದೆ. ಹಾಗೂ ಮಾನ್ಯ ಲೋಕಾಯುಕ್ತ ಕಛೇರಿಯಲ್ಲೂ ಸಹ ದೂರು ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ. ಹಾಗಾಗಿ ಉಳಿದ ಎಲ್ಲಾ ಪಂಚಾಯಿತಿಗಳಲ್ಲೂ ೧೫ನೇ ಹಣಕಾಸು ಹಾಗೂ ವರ್ಗ-೧ರಲ್ಲಿ ಅವ್ಯವಹಾರ ನಡೆದಿರುವುದಾಗಿ ಅನುಮಾನವಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಂಡು ಪಂಚಾಯತ್‌ರಾಜ್ ಕಾಯ್ದೆಯನ್ವಯ ದೂರು ದಾಖಲಿಸಬೇಕೆಂದು ಮನವಿ ಮಾಡಿದರು.

ತಾಲ್ಲೂಕಿನಾದ್ಯಂತ ಎಲ್ಲಾ ಗ್ರಾಮಗಳಲ್ಲಿ ವಾರ್ಡ ಸಭೆ-ಗ್ರಾಮಸಭೆ ಹಾಗೂ ಜಮಾಬಂದಿ ನಡೆಯದೇ ಲಕ್ಷಾಂತರ ರೂಗಳನ್ನು ಖರ್ಚುಮಾಡಿರುವ ಬಗ್ಗೆ ತನಿಖೆ ನಡೆಸಬೇಕು, ೨೧ ಗ್ರಾಮ ಪಂಚಾಯಿತಿಯಲ್ಲೂ ೨೦೨೩-೨೪ರ ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಮುಗಿಯುವ ಸಂದರ್ಭದಲ್ಲಿ ೧೫ನೇ ಹಣಕಾಸು ಹಾಗೂ ವರ್ಗ-೧ರ ಅನುದಾನದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ನಡೆಸಬೇಕು.

ತಾಲ್ಲೂಕು ಪಂಚಾಯಿತಿಯಲ್ಲಿ ೨೦೧೧ರಲ್ಲಿ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖರೀದಿ ಮಾಡಿರುವ ಸಕ್ಕಿಂಗ್ ಮಿಷನ್‌ನ್ನು ಖರೀದಿ ಮಾಡಿದ್ದು, ಇದನ್ನು ಸಾರ್ವಜನಿಕವಾಗಿ ಉಪಯೋಗಿಸದೇ ಮೂಲೆ ಗುಂಪು ಮಾಡಿ ಲಕ್ಷಾಂತರ ರೂಗಳನ್ನು ದುರುಪಯೋಗಪಡಿಸಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು.

ಸಕ್ಕಿಂಗ್ ಮಿಷನ್ ಯಂತ್ರವನ್ನು ಉಪಯೋಗಿಸಿರುವಂತೆ ಚಾಲಕನಿಗೆ ನೀಡಿದ ವೇತನ, ಅದಕ್ಕೆ ಬಳಸಿದ ಡಿಸೇಲ್, ರಿಪೇರಿಗೆ ಆದ ಖರ್ಚು (ಲಾಕ್ ಪುಸ್ತಕ) ೨೦೧೧ರಿಂದ ೨೦೨೩ರವರೆಗೆ ನಿರ್ವಹಣೆಯಾಗಿರುವ ಬಗ್ಗೆ ತನಿಖೆ ನಡೆಸಬೇಕು.

ಆಲಂಬಾಡಿ ಜೊತೇನಹಳ್ಳಿ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ಜೊತೇನಹಳ್ಳಿ ಗ್ರಾಮದ ಅಮರೇಶ ಅವರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ತನ್ನ ತಾಯಿ ಮತ್ತು ತಂದೆಯ ಹೆಸರಿಗೆ ಲಕ್ಷಾಂತರ ರೂಗಳನ್ನು ವರ್ಗಾಹಿಸಿಕೊಳ್ಳಲಾಗಿದೆ. ಇದರ ಬಗ್ಗೆ ತನಿಖೆಯಾಗಬೇಕು.

ಬೂದಿಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಲಂಬಾಡಿ ಜೊತೇನಹಳ್ಳಿ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ಜೊತೇನಹಳ್ಳಿ ಗ್ರಾಮದ ಅಮರೇಶ್ ಎಂಬುವವರು ಕಂದಾಯ ಜಮೀನಿನಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪಂಚಾಯಿತಿಯಿಂದ ಯಾವುದೇ ಖಾತೆ, ಕಂದಾಯ, ಪರವಾನಿಗೆ, ಇಲ್ಲದೆ ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದು, ಅದಕ್ಕೆ ನಮ್ಮ ಸಂಘಟನೆಯ ಮನವಿ ನೀಡಿದ್ದು, ಮನವಿಯಂತೆ ಇಓ ಸಂಬಂದಪಟ್ಟವರಿಗೆ ನೋಟಿಸ್ ನೀಡಿದ್ದು, ಅದರಂತೆ ತಾನು ಮಾಡಿರುವುದು ತಪ್ಪೆಂದು ಒಪ್ಪಿಕೊಂಡಿದ್ದರು.

ಇದುವರೆಗೂ ಯಾವುದೇ ಕ್ರಮಕೈಗೊಳ್ಳದೇ ಅವರನ್ನು ರಕ್ಷಣೆ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಿ, ಸರ್ಕಾರಕ್ಕೆ ಆದ ನಷ್ಟವನ್ನು ತುಂಬಿಸಬೇಕು. ೨೧ ಗ್ರಾಮಪಂಚಾಯಿತಿಗಳಲ್ಲಿ ನಮೂನೆ-೯ರಲ್ಲಿ ನಡೆದಿರುವ ನಕಲಿ ಸಹಿಗಳ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

೧೫ದಿನಗಳೊಳಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಿ ಸಂಘಟನೆಗೆ ಮಾಹಿತಿ ನೀಡದಿದ್ದ ಪಕ್ಷದಲ್ಲಿ ತಾಲ್ಲೂಕು ಪಂಚಾಯಿತಿ ಮುಂಭಾಗ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಹುಳದೇನಹಳ್ಳಿ ವೆಂಕಟೇಶ್, ತಾಲ್ಲೂಕು ಅಧ್ಯಕ್ಷ ಹಿರೇಕರಪನಹಳ್ಳಿ ಮುನಿರಾಜ್, ರಾಜ್ಯ ಸಮಿತಿ ಸದಸ್ಯ ಸೇಟ್ ಕಾಂಪೌಂಡ್ ಮಾರಿ, ಕಲಾವಿದ ಯಲ್ಲಪ್ಪ, ಅರವಿಂದ್ ಮಾರ, ಹುಣಸನಹಳ್ಳಿ ಸತೀಶ್, ಅತ್ತಿಗಿರಿ ನಾರಾಯಣಸ್ವಾಮಿ, ಹಂಚಾಳ ವೆಂಕಟೇಶ್ ಹಾಗೂ ಮುಂತಾದವರು ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!