• Sun. Apr 28th, 2024

PLACE YOUR AD HERE AT LOWEST PRICE

ದೆಹಲಿಯ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ತಂಡವು 428 ರನ್‌ಗಳನ್ನು ದಾಖಲಿಸುವ ಮೂಲಕ ವಿಶ್ವಕಪ್‌ನ ಇತಿಹಾಸದಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಆ ಮೂಲಕ ಈ ಹಿಂದೆ 2015ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ ತಂಡದ 417 ರನ್‌ಗಳ ದಾಖಲೆಯನ್ನು ಹಿಂದಿಕ್ಕಿದೆ.

ಇಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವು ಟಾಸ್ ಗೆದ್ದುಕೊಂಡ ಬಳಿಕ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತ್ತು. ನಿಗದಿತ 50 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೇವಲ 5 ವಿಕೆಟ್‌ಗಳನ್ನು ಕಳೆದುಕೊಂಡು 428 ರನ್‌ಗಳನ್ನು ಕಲೆ ಹಾಕಿತ್ತು.

ದಕ್ಷಿಣ ಆಫ್ರಿಕಾ ಪರವಾಗಿ ಕ್ವಿಂಟನ್ ಡಿ ಕಾಕ್(100 ರನ್),  ವ್ಯಾನ್ ಡರ್ ಡುಸ್ಸೆನ್(108 ರನ್) ಹಾಗೂ ಮಾರ್ಕರಮ್(106 ರನ್) ಅವರ ಶತಕ ಬಾರಿಸಿದ್ದಾರೆ.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ ನಾಯಕನ ತೀರ್ಮಾನವು ಶ್ರೀಲಂಕಾಕ್ಕೆ ದುಬಾರಿಯಾಗಿ ಪರಿಣಮಿಸಿತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!