• Sun. Apr 28th, 2024

PLACE YOUR AD HERE AT LOWEST PRICE

ಕೆಜಿಎಫ್:ಇಲ್ಲಿನ ಕ್ಯಾಸಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವಂತ ಮುಖ್ಯ ರಸ್ತೆಯ ತಿರುವಿನಲ್ಲಿ ಹೆಚ್ಚಿನ ರೀತಿಯ ಅಪಘಾತಗಳು ಸಂಭವಿಸುತ್ತಿರುವ ಕಾರಣ ಅಪಘಾತಗಳನ್ನು ತಡೆಯುವುದಕ್ಕೆ ಗ್ರಾಪಂಯ ಆಡಳಿತ ಮಂಡಳಿ ಹಾಗೂ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಿಂದ ಅಡ್ಡಲಾಗಿದ್ದ  ಗಿಡಗಳನ್ನು ತೆರುವುಗೊಳಿಸಲು ಮುಂದಾಗಿದ್ದಾರೆ.

ಕ್ಯಾಸಂಬಳ್ಳಿ ಗ್ರಾಮದಿಂದ ರಾಜಪೇಟ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಮಾರ್ಗದ ರಸ್ತೆಯಲ್ಲಿ ಹೆಚ್ಚು ತಿರುವುಗಳು ಇದ್ದು, ತಿರುವುಗಳಲ್ಲಿ ಅಡ್ಡಲಾಗಿ ಗಿಡಗಳು ಬೆಳೆದಿರುವ ಕಾರಣ ಅನೇಕ ಭಾರಿ ವಾಹನಗಳು ವೇಗವಾಗಿ ಬಂದು ಅಪಘಾತಗಳು ಸಂಭವಿಸಿವೆ, ಹಲವು ಭಾರಿ ವಾಹನ ಸವಾರರ ಪ್ರಾಣಹಾನಿ ಸಹ ನಡೆದಿರುವ ಘಟನೆಗಳು ನಡೆದಿವೆ.

ಮುಂದಿನ ದಿನಗಳಲ್ಲಿ ರಸ್ತೆಯ ಅಪಘಾತಗಳನ್ನು ತಪ್ಪಿಸುವ ದೃಷ್ಠಿಯಿಂದ ಕ್ಯಾಸಂಬಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಆಡಳಿತ ಮಂಡಳಿ ಹಾಗೂ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯವರು ರಸ್ತೆಯ ಅಕ್ಕ-ಪಕ್ಕದಲ್ಲಿ ಬೆಳೆದಿರುವ ಬೃಹತ್ ಗಿಡ-ಮರಗಳನ್ನು ಜೆಸಿಬಿ ಯಂತ್ರದ ಮೂಲಕ ತೆರುವು ಗೊಳಿಸಿ ಅಪಘಾತ ಸಂಭವಿಸುವುದನ್ನು ತಡೆಯುವುದಕ್ಕೆ ಶ್ರಮಿಸಿದ್ದಾರೆ.

ಕ್ಯಾಸಂಬಳ್ಳಿ ಗ್ರಾಪಂ ಅಧ್ಯಕ್ಷ ಜಯರಾಮ್ ರೆಡ್ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಶ್ಮಿ, ಉಪಾಧ್ಯಕ್ಷರಾದ ಅಂಜಲಿ ಪ್ರತಾಫ್ ಹಾಗೂ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ರಸ್ತೆಯ ಬಧಿಯಲ್ಲಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸುವ ಕಾರ್ಯವು ನಡೆಯುತ್ತಿದೆ ಎಂದು ಗ್ರಾಪಂ ಸದಸ್ಯರು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ರಸ್ತೆ ಪಕ್ಕದಲ್ಲಿ ದೊಡ್ಡ ಪ್ರಮಾಣದಲ್ಲಿ ಗಿಡಗಳು ಬೆಳೆದಿರುವುದರಿಂದ ವಾಹನಗಳ ನಡುವೆ ಅಪಘಾತಗಳು ನಡೆಯುತ್ತಿತ್ತು, ಮುಂದಿನ ದಿನಗಳಲ್ಲಿ ಅಪಘಾತಗಳನ್ನು ತಡೆಯುವ ದೃಷ್ಠಿಯಿಂದ ಕ್ಯಾಸಂಬಳ್ಳಿ ಗ್ರಾಪಂಯ ಸಹಕಾರದೊಂದಿಗೆ ಗಿಡಗಳನ್ನು ತೆರುವು ಮಾಡಲಾಗುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಿದ್ದಾರೆ ಎಂದು ಕ್ಯಾಸಂಬಳ್ಳಿ ಪೊಲೀಸ್ ಠಾಣೆ ಪಿಎಸೈ ಶ್ಯಾಮಲ ತಿಳಿಸಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!