• Mon. Apr 29th, 2024

PLACE YOUR AD HERE AT LOWEST PRICE

ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞ, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದ ಕೆ.ಸಿ.ರಘು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಅವರಿಗೆ 60 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು. ಅಂತಿಮ ಸಂದರ್ಶನ ಮಾಡಲಿಚ್ಛಿಸುವವರು ಅವರ ನಿವಾಸಕ್ಕೆ ಭೇಟಿ ನೀಡಬಹುದು ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ವಾಗ್ಮಿಯಾಗಿಯೂ ಗುರುತಿಸಿಕೊಂಡಿದ್ದ ಡಾ.ಕೆ.ಸಿ ರಘು, ಆಹಾರ ಆರೋಗ್ಯದ ವಿಚಾರದಲ್ಲಿಅತ್ಯದ್ಭುತ ಜ್ಞಾನ ಹೊಂದಿದ್ದರು. ಆದರೆ ರಘು  ಅವರು ವಯಸ್ಸಲ್ಲದ ವಯಸ್ಸಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆಹಾರ ವಿಚಾರದಲ್ಲಿ  ಸಾಕಷ್ಟು ಸ್ಪಷ್ಟ ಮಾಹಿತಿ ನೀಡುತ್ತಿದ್ದ  ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಕೆ ಸಿ ರಘು ಅವರು, ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಅವರೇ ಸ್ಥಾಪಿಸಿದ್ದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು.

ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.

ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡು, ಆಹಾರಕ್ಕೆ ಸಂಬಂಧಪಟ್ಟ ಲೇಖಕರಾಗಿ, ‘ಆಹಾರ ರಾಜಕೀಯ’ ಮತ್ತು ತುತ್ತು ತತ್ವ’ ಎಂಬ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!