• Fri. Oct 18th, 2024

PLACE YOUR AD HERE AT LOWEST PRICE

ಬೆಂಗಳೂರು:ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿರುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ(ಅ.17) ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ‘ಎ.ಟಿ.ಎಮ್.ಸರ್ಕಾರ’ ಎಂದು ಬಿಂಬಿಸುವ ಪ್ರತಿಕೃತಿಯನ್ನು ಎದುರಲ್ಲಿಟ್ಟುಕೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕರ್ನಾಟಕದ ಬಗ್ಗೆ ಇಡೀ ದೇಶ ಆಡಿಕೊಂಡು ನಗುವಂತೆ ಕಾಂಗ್ರೆಸ್ ಮಾಡಿದೆ. ಜನರಿಗೆ ಮಂಕೂಬೂದಿ ಹಾಕಿ ಕಾಂಗ್ರೆಸ್ ಸರ್ಕಾರ ಬಂತು.

ಕಾಂಗ್ರೆಸ್ ಪಕ್ಷದ ರಕ್ತದಲ್ಲೇ ಭ್ರಷ್ಟಾಚಾರವಿದೆ. ಹೋಟೆಲು ಮೆನು ರೀತಿಯಲ್ಲಿ ರೇಟ್ ಲಿಸ್ಟ್ ಸರ್ಕಾರವಾಗಿದೆ. ಗುತ್ತಿಗೆದಾರರ ಬಳಿ ಸಿಕ್ಕ ಹಣದ ಹಿಂದೆ ಇರುವ ವ್ಯಕ್ತಿಗಳ ಕುರಿತು ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವ, ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ದಿನದಿಂದ ಆಡಳಿತ ವೈಫಲ್ಯ ಕಂಡಿದೆ. ಜನರ ವಿರುದ್ದವಾಗಿ ಆಡಳಿತ ಮಾಡುತ್ತಿದೆ. ಇಡೀ ರಾಜ್ಯವನ್ನು ಲೂಟಿ ಭಾಗ್ಯ ಮಾಡಿದೆ. ಸ್ವಾರ್ಥ ರಾಜಕಾರಣದಿಂದ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ.

ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ನಿಸ್ಸೀಮರು. ನಾಲ್ಕು ತಿಂಗಳಲ್ಲಿ ನಲವತ್ತು ಅವತಾರ ಆಡಿದ್ದಾರೆ. ಆರೂವರೆ ಕೋಟಿ ಜನರ ಆಶಯಕ್ಕೆ ಧಕ್ಕೆ ತಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರಾಜ್ಯಕ್ಕೆ ಬರ ಬಂದಿದೆ. ಈಗ ವಿದ್ಯುತ್ತೂ ಇಲ್ಲ. ಇದೊಂದು ದರಿದ್ರ ಸರ್ಕಾರ’ ಎಂದು ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ಶಾಸಕರಾದ ರವಿಸುಬ್ರಮಣ್ಯ, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಗೋಪಿನಾಥ್ ರೆಡ್ಡಿ, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಬಿಜೆಪಿ ಮುಖಂಡ ಭಾಸ್ಕರ್ ರಾವ್, ಮಾಜಿ ಮಹಾಪೌರರಾದ ಎಸ್.ಕೆ.ನಟರಾಜ್, ಬಿಬಿಎಂಪಿ ವಿರೋಧ ಪಕ್ಷದ ನಾಯಕರಾದ ಪದ್ಮನಾಭ ರೆಡ್ಡಿ, ನಿಕಟಪೂರ್ವ ಬಿಬಿಎಂಪಿ ಸದಸ್ಯರು, ಉಪಾಧ್ಯಕ್ಷರಾದ ಕೆ.ಉಮೇಶ್ ಶೆಟ್ಟಿರವರು ಹಾಗೂ ಜಿಲ್ಲಾಧ್ಯಕ್ಷರು ಭಾಗವಹಿಸಿದ್ದರು.

Related Post

ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ: ನರಸಿಂಹಯ್ಯ 
ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ, ಎಲ್ಲಾ ಸಮುದಾಯಗಳಿಗೆ ಆದರ್ಶ: ಬೈರತಿ ಸುರೇಶ್
ನ್ಯಾಯಾಲಯದ ಆದೇಶ ಧಿಕ್ಕರಿಸಿ ಡಿಸಿ ಅಕ್ರಂಪಾಷಾರಿoದ ಸ್ವಜನಪಕ್ಷಪಾತ – ವಾಲ್ಮೀಕಿ ನಾಯಕ ಸಂಘಟನೆಗಳ ಆರೋಪ

Leave a Reply

Your email address will not be published. Required fields are marked *

You missed

error: Content is protected !!