• Mon. Apr 29th, 2024

PLACE YOUR AD HERE AT LOWEST PRICE

2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ತಿಳಿಸಿದ್ದಾರೆ.

ತಿರುವನಂತಪುರಂನ ಟೆಕ್ನೋಪಾರ್ಕ್‌ನಲ್ಲಿ ತಮ್ಮ ಕಚೇರಿಯನ್ನು ಉದ್ಘಾಟಿಸಿದ ನಂತರ ಅಮೆರಿಕಾ ಮೂಲದ ಮತ್ತು ಸಿಲಿಕಾನ್ ವ್ಯಾಲಿ-ಇನ್‌ಕ್ಯುಬೇಟೆಡ್ ಡಿ2ಸಿ ಮಾರ್ಕೆಟ್‌ಪ್ಲೇಸ್ ವೇ.ಕಾಮ್‌ನ ವೃತ್ತಿಪರರೊಂದಿಗೆ ಸಂವಾದ ನಡೆಸಿದರು.

ಪ್ರತಿಪಕ್ಷಗಳ ಒಕ್ಕೂಟದ ಉಪಸ್ಥಿತಿಯಿಂದಾಗಿ ಮುಂದಿನ ವರ್ಷದ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರುವ ಸಾಧ್ಯತೆಯಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸುವ ಮೂಲಕ ಇಂಡಿಯಾ ಮೈತ್ರಿಕೂಟವು ಕೇಂದ್ರದಲ್ಲಿ ಅಧಿಕಾರವನ್ನು ಪಡೆಯುವ ಅವಕಾಶವಿದೆ ಎಂದು ತರೂರ್ ಹೇಳಿದರು.

ಚುನಾವಣೋತ್ತರ ಸನ್ನಿವೇಶದ ಕುರಿತು ಮಾತನಾಡಿದ ಅವರು, ”ಒಮ್ಮೆ ಫಲಿತಾಂಶ ಬಂದರೆ, ಅದು ಒಂದು ಪಕ್ಷವಲ್ಲದ ಸಮ್ಮಿಶ್ರ ಬಣವಾಗಿರುವ ಕಾರಣ, ಆ ಪಕ್ಷಗಳ ನಾಯಕರು ಒಟ್ಟಾಗಿ ಯಾರನ್ನಾದರನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ.

ಆದರೆ ನನ್ನ ಊಹೆ ಏನೆಂದರೆ, ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಆಗಿರಬಹುದು, ಆಗ ಅವರು ಭಾರತದ ಮೊದಲ ದಲಿತ ಪ್ರಧಾನಿಯಾಗುತ್ತಾರೆ ಅಥವಾ ರಾಹುಲ್ ಗಾಂಧಿ ಆಗಿರಬಹುದು ಎಂದು ಹೇಳಿದರು.

ಶಶಿ ತರೂರ್ ಕೂಡ ತಮಗೆ ವಹಿಸುವ ಯಾವುದೇ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯದ ಬಗ್ಗೆ ವಿಶ್ವಾಸ ಹೊಂದಿರುವುದಾಗಿ ತಿಳಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!