• Mon. Apr 29th, 2024

PLACE YOUR AD HERE AT LOWEST PRICE

ಬೆಂಗಳೂರು:ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು,  ಹೊರ ರಾಜ್ಯಗಳ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ಜತೆ ವ್ಯವಹರಿಸುವಾಗ ಅನಿವಾರ್ಯವಾಗಿ ಇಂಗ್ಲಿಷ್ ಬಳಸಬೇಕಾಗುತ್ತದೆ.

ರಾಜ್ಯ ಸರ್ಕಾರದ ಒಳಗಿನ ಆಡಳಿತ ವ್ಯವಹಾರಗಳಲ್ಲಿ ಇಂಗ್ಲಿಷ್ ಬಳಕೆ ಅನಗತ್ಯ. ಆ ರೀತಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದು, ಕಡತ ಮಂಡಿಸುವುದನ್ನು ಕೈಬಿಟ್ಟು ಸಂಪೂರ್ಣವಾಗಿ ಕನ್ನಡ ಬಳಕೆ ಮಾಡಬೇಕು ಎಂದರು. ಆದ್ಯತೆ

ಇತರ ಭಾಷೆ, ಧರ್ಮಗಳನ್ನೂ ಪ್ರೀತಿಸಬೇಕು. ಆದರೆ, ಕನ್ನಡವನ್ನೇ ಹೆಚ್ಚು ಬಳಕೆ ಮಾಡಬೇಕು. ಕನ್ನಡವನ್ನು ಮತ್ತಷ್ಟು ಸಮೃದ್ಧಗೊಳಿಸುವ ಕೆಲಸ ಮಾಡಬೇಕು. ಇತರ ಭಾಷೆಗಳ ಬಗೆಗಿನ ಉದಾರತೆಯು ಕನ್ನಡಕ್ಕೆ ತೊಂದರೆ ಉಂಟುಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಕನ್ನಡ ನಾಡಿನಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬರು ಕನ್ನಡ ಮಾತನಾಡಬೇಕು. ನಾವು ತಮಿಳುನಾಡಿಗೆ ಹೋಗಿ ತಮಿಳು ಗೊತ್ತಿಲ್ಲದೆ ನಾವು ಬದಕುವುದು ಆಗುತ್ತಾ? ಆದ್ರೆ, ಇಲ್ಲಿ ಮಾತ್ರಾ ಕನ್ನಡ ಗೊತ್ತಿಲ್ಲದೆ ಇದ್ದರೂ ಬದಕಬಹುದು ಹೇಗಿದೆ ನೋಡಿ ? ಕರ್ನಾಟಕದವರು ವಿಶಾಲ ಹೃದಯದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ವಾಸ್ತವವಾಗಿ ಕರ್ನಾಟಕ 50ರ ಸಂಭ್ರಮವನ್ನ ಕಳೆದ ವರ್ಷ ಆಚರಣೆ ಮಾಡಬೇಕಾಗಿತ್ತು. ಆದರೆ ಹಿಂದಿನ ಸರ್ಕಾರ ಮಾಡಿಲ್ಲ. ಹೀಗಾಗಿ, ನಾನು ಬಜೆಟ್‌ನಲ್ಲಿಯೇ ಕರ್ನಾಟಕ 50ನೇ ವರ್ಷದ ಸಂಭ್ರಮಾಚರಣೆ ಬಗ್ಗೆ ಉಲ್ಲೇಖಿಸಿದ್ದೇನೆ. ಇಡೀ ವರ್ಷ ಈ ಹಬ್ಬ ಆಚರಣೆ ಮಾಡಲಿದ್ದೇವೆ. ಈಗ ಸಿದ್ಧಪಡಿಸಿರುವ ಲಾಂಛನದಲ್ಲಿ ಹೆಸರಾಯಿತು ಕನ್ನಡ ಉಸಿರಾಯಿತು ಕನ್ನಡ ಎಂಬ ಘೋಷಣಾ ವ್ಯಾಕ್ಯ ಇದೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಕಾನೂನು ಸಚಿವ ಎಚ್‌.ಕೆ.ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್‌, ವಿಧಾನ ಪರಿಷತ್‌ ಸದಸ್ಯ ನಾಗರಾಜ್‌ ಯಾದವ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್‌, ಮಂಜುಳಾ ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!