• Tue. Apr 30th, 2024

PLACE YOUR AD HERE AT LOWEST PRICE

ಬಂಗಾರಪೇಟೆ :ತಾಲೂಕು ಪಂಚಾಯಿತಿ ಕಚೇರಿ ಮುಂದೆ ಸಿಐಟಿಯು ಸಂಘಟನೆ ವತಿಯಿಂದ ಬಿಸಿಯೂಟ ನೌಕರರ ಹಲವು ಬೇಡಿಕೆಗಳ ಈಡೇರಿಕಗಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರವಿಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಜಯಲಕ್ಷ್ಮಿ ಮಾತನಾಡಿ, ಬಿಸಿಯೂಟ ನೌಕರರು ಹಲವು ವರ್ಷಗಳಿಂದ ನಮ್ಮ ಬೇಡಿಕೆಗಳ ಬಗ್ಗೆ ಹಲವಾರು ಬಾರಿ ಮನವಿ ನೀಡಲಾಗಿದೆ.

ಆಗಸ್ಟ್ 16,17ರಂದು ಬೆಂಗಳೂರಿನಲ್ಲಿ ನಡೆದ ಹೋರಾಟ 28 -12- 2022 ರಂದು ಬೆಳಗಾವಿ ಸುವರ್ಣ ಸೌಧ ಎದುರು ಹೋರಾಟ, ಬೆಂಗಳೂರಿನಲ್ಲಿ ಫೆಬ್ರವರಿ 13, 14, 15, 2023 ರಂದು ನಡೆದ ಹೋರಾಟ ಸಂದರ್ಭದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದೆಂದು ಸರ್ಕಾರ ಭರವಸೆ ನೀಡಿತ್ತು.

ಆದರೆ ಇದುವರೆಗೂ ಯಾವುದೇ ಸಮಸ್ಯೆಗೆ ಪರಿಹಾರ ಸಿಗದೇ ಇರುವ ಕಾರಣಕ್ಕೆ ಅನಿವಾರ್ಯವಾಗಿ ಅಕ್ಟೋಬರ್ 30,2023ರಂದು ಬಿಸಿಊಟ ನೌಕರರು ತಮ್ಮ ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟ ಅವಧಿ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಕೂಡಲೇ ಸರ್ಕಾರ ಎಚ್ಚೆತ್ತಿಕೊಂಡು ನಮ್ಮ ಬೇಡಿಕೆಗಳಾದ ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿ ನಡೆಸಬೇಕು, ಕೆಲಸದ ಸ್ಥಳದಲ್ಲಿ ಮರಣ ಹೊಂದಿದ್ದರೆ 25 ಲಕ್ಷ ರೂಗಳ ಪರಿಹಾರ ಕೊಡಬೇಕು, 2022 ರಿಂದ 60 ವರ್ಷ ಆಗಿದೆ ಎಂದು ಕೆಲಸದಿಂದ ತೆಗೆದಿರುವ ಎಲ್ಲರಿಗೂ ಒಂದು ಲಕ್ಷ ಇಡಗಂಟು ಕೊಡಬೇಕು.

ಹಾಗೆಯೇ 60 ವರ್ಷದ ನಂತರ ನಿವೃತ್ತಿ ಆದವರಿಗೆ 1 ಲಕ್ಷ ಇಡಗಂಟು ಕೊಡುವ ಯೋಜನೆಗೆ ಹಣಕಾಸು ಇಲಾಖೆಯಲ್ಲಿ ಒಪ್ಪಿಸಿ ಜಾರಿ ಮಾಡಬೇಕು, ಬಜೆಟ್ ನಲ್ಲಿ ಈ ನೌಕರರಿಗೆ ಹೆಚ್ಚಳ ಮಾಡಿದ 1000 ವೇತನವನ್ನು ಜನವರಿ 2023 ರಿಂದ ಅನ್ವಯಿಸಿ ಜಾರಿ ಮಾಡಬೇಕು, ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ನಿಲ್ಲಬೇಕು ಎಂದು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಮಂಜುಳಾ, ಸವಿತಾ ಶೇಖರಪ್ಪ, ಕೂಳೂರು ಮಂಜುಳಾ, ವಿಜಯ ಕುಮಾರಿ, ಗುಣಮಣಿ,ರತ್ನಮ್ಮ, ಭಾರತಿ,ಗೌರಮ್ಮ, ನೀಲಮ್ಮ ಮೊದಲಾದವರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!