• Mon. May 13th, 2024

PLACE YOUR AD HERE AT LOWEST PRICE

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ ಗಮನಿಸಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪಟಾಕಿ ನಿಷೇಧ ಪ್ರಾಯೋಗಿಕ ಜಾರಿಗೊಳಿಸಿ ಯಶಸ್ವಿಯಾದರೆ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು.

ಇತ್ತೀಚೆಗೆ ಪಟಾಕಿ ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು” ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಭೇಟಿ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಗೃಹ ಇಲಾಖೆ ಸಚಿವ ಪರಮೇಶ್ವರ್​ ಇಂದು ಭೇಟಿ ಮಾಡಿದ್ದು, ಘಟನೆ ಅಗ್ನಿಶಾಮಕ ಡಿಐಜಿ ಪಂತ್, ಐಜಿಪಿ ರವಿಕಾಂತೇಗೌಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ.​ ಮಳಿಗೆ ಮಾಲೀಕನ ಬಗ್ಗೆ ಡಿಸಿ ದಯಾನಂದ್ ಅವರಿಂದ ಮಾಹಿತಿ ಪಡೆದರು.

ಸ್ಥಳದಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ದಯಾನಂದ್, ಎಎಸ್ಪಿ ಪುರುಷೋತ್ತಮ್, ಡಿವೈಎಸ್ಪಿ ಮೋಹನ್, ತಹಸೀಲ್ದಾರ್ ಶಿವಪ್ಪ ಲಮ್ಹಾಣಿ ಸೇರಿದಂತೆ ಪ್ರಮುಖರು ಹಾಜರಿದ್ದರು.

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆ ಮಾಲೀಕರು 2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ನಕಲಿ ಲೈಸೆನ್ಸ್ ಸೃಷ್ಟಿ ಮಾಡಿದ್ದಾರೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್​ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!