• Sat. Jul 27th, 2024

ದೊಡ್ಡವಲಗಮಾದಿ ಜಾತಿ ನಿಂದನೆ ಪ್ರಕರಣ:ಎಸ್.ಪಿ ಶಾಂತರಾಜು ಭೇಟಿ.

PLACE YOUR AD HERE AT LOWEST PRICE

ಬಂಗಾರಪೇಟೆ ತಾಲ್ಲೂಕು ದೊಡ್ಡವಲಗಮಾದಿಯಲ್ಲಿ ನಡೆದಿದ್ದ ಹಲ್ಲೆ ಮತ್ತು ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಕೆಜಿಎಫ್ ಎಸ್.ಪಿ ಕೆ.ಎಂ.ಶಾಂತರಾಜುರವರು ಇಂದು ಸಂಜೆ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತ ಅಮರೇಶ್ ರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ಕೂಲಿ ಕಾಸು ಕೇಳಿದ ಕಾರಣಕ್ಕೆ ಅಮರೇಶ್ ಮೇಲೆ ಅದೇ ಗ್ರಾಮದ ಜಗದೀಶ್ ಸಿಂಗ್, ರವೀಂದ್ರ ಸಿಂಗ್ ಮತ್ತು ಸತೀಶ್ ಸಿಂಗ್ ಹಲ್ಲೆ ಮಾಡಿ ಜಾತಿನಿಂದನೆ ಮಾಡಿದ್ದರು. ಈ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಒಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ.

ಪ್ರಕರಣಕ್ಕೆ ಸಮಂಬಂಧಿಸಿ ಇಂದು ಸಂಜೆ ಎಸ್.ಪಿ ಕೆ.ಎಂ.ಶಾಂತರಾಜುರವರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಅಮರೆಶ್ ಬಳಿ ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡು ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿ ನಿಮಗೆ ರಕ್ಷಣೆ ನೀಡುತ್ತೇವೆ ಎಂದು ಧೈರ್ಯ ತುಂಬಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!