• Mon. Apr 29th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಜಿಲ್ಲಾಧಿಕಾರಿಯಾಗಿ ಅಕ್ರಂಪಾಷ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಾರಾಯಣ್ ಅಧಿಕಾರ ವಹಿಸಿಕೊಂಡ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ನಿರಂತರವಾಗಿ ದಲಿತ ಸಮುದಾಯಗಳ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಎಗ್ಗಿಲದೆ ನಡೆಯುತ್ತಿದೆ ಎಂದು ಕರ್ನಾಟಕ ದಲಿತ ರೈತಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್ ಆರೋಪ ಮಾಡಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಪತ್ರಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಶ್ರೀನಿವಾಸ್ ರವರ ಬರ್ಬರ ಹತ್ಯೆಯನ್ನು ಖಂಡಿಸಿ ಶ್ರದ್ಧಾಂಜಲಿ ಅರ್ಪಿಸಿ, ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಬಂಗಾರಪೇಟೆ, ಮಾಲೂರು, ಶ್ರೀನಿವಾಸಪುರ, ಚಿಂತಾಮಣಿ ತಾಲ್ಲೂಕುಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೂ ಸಹ ಕಣ್ಣಿದ್ದು ಕುರುಡರಂತೆ ಜಿಲ್ಲಾಡಳಿತ-ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಮೌನವಹಿಸಿರುವುದರ ಉದ್ದೇಶವಾದರೂ ಏನು?

ದಲಿತರ ಏಳ್ಗೆಯನ್ನು ಸಹಿಸದ ಕೆಲವು ಪಟ್ಟಭದ್ರಹಿತಾಸಕ್ತಿಗಳ ಕಪಿಮುಷ್ಠಿಯಲ್ಲಿ ಸಿಲುಕಿ, ದಲಿತರನ್ನು ದಮನ ಮಾಡಲು, ಹೊರಟಿದ್ದಾರೆಯೇ ಎಂಬ ಅನುಮಾನ ಹುಟ್ಟಿಹಾಕುತ್ತಿದೆ. ಇಂತಹ ದಲಿತ ವಿರೋಧಿ ಅಧಿಕಾರಿಗಳು ಮೀಸಲು ಕ್ಷೇತ್ರಕ್ಕೆ ಅಗತ್ಯವಿಲ್ಲವೆಂದು ಪರಿಭಾವಿಸಿ ಎಲ್ಲಾ ದಲಿತಪರ ಒಕ್ಕೂಟಗಳ ವೇದಿಕೆಗಳ ವತಿಯಿಂದ ಅ.೨೫ರಂದು “ಗೋಬ್ಯಾಕ್ ಜಿಲ್ಲಾಧಿಕಾರಿ” ಚಳುವಳಿಯನ್ನು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಹೂವರಸನಹಳ್ಳಿ ರಾಜಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ದಲಿತರನ್ನು ಓಟ್‌ಬ್ಯಾಂಕ್ ಮಾಡಿಕೊಂಡು ದಲಿತರನ್ನೇ ದಮನ ಮಾಡಲು ಹೊರಟಿರುವುದು ಇಡೀ ನಾಗರೀಕ ಸಮುದಾಯ ತಲೆತಗ್ಗಿಸುವಂತಾಗಿದೆ. ಕೇವಲ ಒಂದೇ ವಾರದಲ್ಲಿ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ಸವರ್ಣಿಯರಿಂದ ಕೂಲಿ ಹಣ ಕೇಳಿದ್ದಕ್ಕಾಗಿ ಅಮರೇಶ್ ಎಂಬುವವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ,

ಮಾಲೂರಿನಲ್ಲಿ ಗ್ರಾ.ಪಂ ಸದಸ್ಯ ಮುನಿಯಪ್ಪರವರು ಬರ್ಬರ ಹತ್ಯೆ, ಚಿಂತಾಮಣಿಯಲ್ಲಿ ನಾಯಕ ಸಮುದಾಯದ ನಗರಸಭೆ ಸದಸ್ಯೆನ ಮೇಲೆ ಹಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ರಾಕೇಶ್ ಹಾಗೂ ಪ್ರಸ್ತುತ ಮಾಜಿ ಜಿ.ಪಂ ಅಧ್ಯಕ್ಷ ಶ್ರೀನಿವಾಸ್‌ರವರನ್ನು ಹಾಡುಹಗಲೇ ಅವರದೇ ಸ್ಥಳದಲ್ಲಿ ಕೊಲೆ ಮಾಡಲಾಗಿದೆ.

ಇದರೊಂಟಿಗೆ ಫೋಕ್ಸೊ, ಅತ್ಯಾಚಾರ, ಜಾತಿನಿಂಧನೆ ಪ್ರಕರಣಗಳು ಯತೇಚ್ಚವಾಗಿ ನಡೆಯುತ್ತಿದೆ. ಇಂತಹ ಕಗ್ಗೊಲೆಗಳ ಕರಾಳ ಅಧ್ಯಾಯಕ್ಕೆ ಕೊನೆಯಿಲ್ಲದಂತಾಗಿದೆ. ಈ ಕೂಡಲೇ ಸರ್ಕಾರ ನಿದ್ರಾಹೀನ ಸ್ಥಿತಿಯಲ್ಲಿರುವ ದಲಿತ ವಿರೋಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು.

ಇಲ್ಲದೆ ಹೋದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿ, ನ.೧೦ರಂದು ತಾಲ್ಲೂಕಿಗೆ ಸಿಎಂ ಬರುವ ಸಂದರ್ಭದಲ್ಲಿ ಕಪ್ಪುಪಟ್ಟಿ ಪ್ರದರ್ಶನ ಹಾಗೂ ಘೇರಾವ್ ಹಾಕಲಾಗುವುದೆಂದು ಗುಡುಗಿದರು.

ಕಲಾವಿದ ಯಲ್ಲಪ್ಪ ಮಾತನಾಡಿ, ಶ್ರೀನಿವಾಸಪುರದ ಶ್ರೀನಿವಾಸ್ ರವರು ಜಿ.ಪಂ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಯಾವುದೇ ಬೇದಭಾವವಿಲ್ಲದೆ ಪಕ್ಷತಾರತಮ್ಯವಿಲ್ಲದೆ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದರು.

ಇಂತಹ ಅಪರೂಪದ ವ್ಯಕ್ತಿಯ ಕಗ್ಗೊಲೆ ಇಡೀ ಜಿಲ್ಲೆಗೆ ತುಂಬಲಾರದ ನಷ್ಟವಾಗಿದ್ದು, ದಲಿತ ಸಮುದಾಯವೇ ಭಯಭೀತಿಯಲ್ಲಿ ಜೀವಿಸುವಂತಾಗಿದೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಸರ್ಕಾರ ಗಮನಹರಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಸೂಲಿಕುಂಟೆ ರಮೇಶ್, ಹುಳದೇನಹಳ್ಳಿ ವೆಂಕಟೇಶ್, ಹುಣಸನಹಳ್ಳಿ ಸತೀಶ್, ಸೇಟ್‌ಕಾಂಪೌಂಡ್ ಮಾರಿ, ಅರವಿಂದ್ ಮಾರಾ, ಗಣೇಶ್, ಕೀಲುಕೊಪ್ಪ ಮುನಿರಾಜು, ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!