• Sun. Apr 28th, 2024

ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್, ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು, ಮತ್ತೊಬ್ಬ ಆರೋಪಿ ಸಂತೋಷ್ ಗಾಯ

PLACE YOUR AD HERE AT LOWEST PRICE

ಕೋಲಾರ, ಅ.೨೩ : ಕೋಲಾರ ಜಿಲ್ಲೆ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ (ಕೌನ್ಸಿಲರ್ ಶ್ರೀನಿವಾಸ್) ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್, ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು, ಮತ್ತೊಬ್ಬ ಆರೋಪಿ ಸಂತೋಷ್ ಗೂ ಗಾಯಗಳಾಗಿವೆ.

ಕೋಲಾರ ಜಿಲ್ಲೆ ವೇಮಗಲ್ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಆರ್.ವೆಂಕಟೇಶ್ ರಿಂದ ಪೈರಿಂಗ್, ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

ಹಲ್ಲೆ ವೇಳೆ ಇನ್ಸ್ಪೆಕ್ಟರ್ ಆರ್.ವೆಂಕಟೇಶ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರಿಗೂ ಗಾಯ, ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ, ಕೊಲೆ ಪ್ರಕರಣದ ಆರು ಜನರ ಪೈಕಿ ಮೂರು ಜನ ಪ್ರಮುಖ ಆರೋಪಿಗಳ ಬಂಧನವಾಗಿದೆ. ಇನ್ನೂ ಮೂರು ಆರೋಪಿಗಳ ಬಂಧನ ಶೀಘ್ರವೇ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇನ್ನೂ ಕಳೆದ ರಾತ್ರಿ ಕೋಲಾರದ ಜಾಲಪ್ಪ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ, ಶ್ರೀನಿವಾಸ್ ಅವರ ಶವ ಪರೀಕ್ಷೆಯನ್ನು ಗೃಹ ಸಚಿವ ಡಿ.ಜಿ.ಪರಮೆಶ್ವರ್ ಅವರ ಸಮ್ಮುಖದಲ್ಲಿ ನಡೆಸಿದ ನಂತರ, ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಹಿರಿಯ ದಲಿತ ಮುಖಂಡರಾದ ಸಿ.ಎಂ.ಮುನಿಯಪ್ಪ, ಮು.ತಿಮ್ಮಯ್ಯ, ಟಿ.ವಿಜಯಕುಮಾರ್, ಸೂಲಿಕುಂಟೆ ರಮೇಶ್, ವಕ್ಕಲೇರಿ ರಾಜಪ್ಪ, ನಾಗನಾಳ ಮುನಿಯಪ್ಪ, ದಲಿತ್ ನಾರಾಯಣಸ್ವಾಮಿ, ಡಿಪಿಎಸ್.ರಾಜಕುಮಾರ್, ಮುಂತಾದವರು ಗೃಹ ಸಚಿವರೊಂದಿಗೆ ಮಾತನಾಡಿ ಕೊಲೆಗಡುಕರನ್ನು ಶೀಘ್ರ ಬಂಧಿಸಲು ಒತ್ತಾಯಿಸಿದರು.

ಶ್ರೀನಿವಾಸ್ ರವರ ಕೊನೆಯ ಹಿನ್ನಲೆ ಸಂಸದ ಎಸ್.ಮುನಿಸ್ವಾಮಿ, ಆಸ್ಪತ್ರೆಗೆ ಆಗಮಿಸಿ ಅಂತಿಮ ದರ್ಶನ ಪಡೆದ ನಂತರ, ಮಾದ್ಯಮಗಳೊಂದಿಗೆ ಮಾತನಾಡಿ, ಕೌನ್ಸಿಲರ್ ಶ್ರೀನಿವಾಸಣ್ಣ ಎಲ್ಲರಿಗೂ ಆಪ್ತರಾಗಿದ್ದರು. ಅವರ ಕೊಲೆಗೆ ಕಾರಣವಾದ ದುಷ್ಕರ್ಮಿಗಳನ್ನು ಗೃಹ ಸಚಿವರು ಹೇಳಿದಂತೆ ೨೪ ಗಂಟೆಯೊಳಗೆ ಬಂಧಿಸಬೇಕು. ತಪ್ಪಿದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಇನ್ನೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ. ನಿನ್ನೆಯಷ್ಟೇ ಮಾಲೂರಿನಲ್ಲಿ ಇದೇ ರೀತಿಯ ಕೊಲೆಯಾಗಿದೆ. ಕಳೆದ ೩ ತಿಂಗಳಿ0ದ ಜಿಲ್ಲೆಯಲ್ಲಿ ಈ ರೀತಿಯ ಬೆಳವಣಿಗೆಗಳು ಜಿಲ್ಲೆಯಲ್ಲಿ ಅಶಾಂತಿ ಉಂಟುಮಾಡುತ್ತಿದ್ದು, ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಎಂ.ಎಲ್.ಸಿ. ಅನಿಲ್‌ಕುಮಾರ್. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷಿö್ಮನಾರಾಯಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಳ್ಳಿ ಗೋವಿಂದರಾಜು, ಆಸ್ಪತ್ರೆಗೆ ಆಗಮಿಸಿ ಮೃತ ಶ್ರೀನವಾಸ್ ದರ್ಶನ ಪಡೆದರು.

ಶ್ರೀನಿವಾಸ ರವರ ಅಂತಿಮ ದರ್ಶನಕ್ಕೆ, ಶ್ರೀನಿವಾಸಪುರ ಪಟ್ಟಣದಲ್ಲಿರುವ ಅವರ ಮನೆಯ ಬಳಿ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಿಗ್ಗೆಯಿಂದಲೇ ಶ್ರೀನಿವಾಸಪುರ ತಾಲ್ಲೂಕು ಸೇರಿದಂತೆ ಹಲವೆಡೆಯಿಂದ ನೂರಾರು ಜನರು ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ, ಇಂದು ಮಧ್ಯಾಹ್ನದ ವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಶ್ರೀನಿವಾಸ್ ಅವರ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಶ್ರೀನಿವಾಸ್‌ರವರ ಅಂತಿಮ ದರ್ಶನಕ್ಕೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!