• Mon. Apr 29th, 2024

PLACE YOUR AD HERE AT LOWEST PRICE

ಭಾರತ ಮತ್ತು ಇತರ ಆರು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ಮಸೂದೆಯನ್ನು ಶ್ರೀಲಂಕಾ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿದ್ದಾರೆ.

ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಪುನರ್‌ನಿರ್ಮಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್‌ನ ಪ್ರವಾಸಿಗರಿಗೆ ತಕ್ಷಣದಿಂದಲೇ ಉಚಿತ ವೀಸಾ ನೀಡಲು ಸಂಪುಟ ಒಪ್ಪಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ 2024ರ ಮಾರ್ಚ್‌ 31ರವರೆಗೆ ಜಾರಿಗೊಳಿಸಲಾಗುವುದು ಎಂದು ಸಬ್ರಿ ಹೇಳಿದ್ದಾರೆ.

ಈ ಆರು ದೇಶಗಳ ಪ್ರವಾಸಿಗರು ಶ್ರೀಲಂಕಾಕ್ಕೆ ಭೇಟಿ ನೀಡಲು ಶುಲ್ಕವಿಲ್ಲದೆ ವೀಸಾಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಭಾರತವು ಶ್ರೀಲಂಕಾದ ಪ್ರವಾಸೋದ್ಯಮಕ್ಕೆ ಪ್ರಮುಖ ಗ್ರಾಹಕ ರಾಷ್ಟ್ರವಾಗಿದೆ.

ಶ್ರೀಲಂಕಾದ ಅಂಕಿಅಂಶಗಳ ಪ್ರಕಾರ, ಸೆಪ್ಟೆಂಬರ್‌ನಲ್ಲಿ  ಭಾರತದ 30,000 ಪ್ರವಾಸಿಗರು ಶ್ರೀಲಂಕಾಗೆ ಭೇಟಿ ನಿಡಿದ್ದು, ಆ ರಾಷ್ಟ್ರಕ್ಕೆ ಭೇಟಿ ನೀಡಿದ ಪ್ರವಾಸಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಪಡೆದಿದೆ. 8,000 ಕ್ಕೂ ಹೆಚ್ಚು ಚೀನೀ ಪ್ರವಾಸಿಗರು ಭೇಟಿ ನೀಡಿದ್ದು 2ನೇ ಸ್ಥಾನ ಪಡೆದಿದೆ.

2019ರಲ್ಲಿ ಶ್ರೀಲಂಕಾದಲ್ಲಿ ನಡೆದ ಈಸ್ಟರ್ ಸಂಡೆ ಬಾಂಬ್ ದಾಳಿಯಲ್ಲಿ 11 ಭಾರತೀಯರು ಸೇರಿದಂತೆ 270 ಜನರು ಸಾವನ್ನಪ್ಪಿದರು. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಆ ಘಟನೆಯ ನಂತರ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡುವ ಪ್ರವಾಸಿಗರ ಗಣನೀಯವಾಗಿ ಕುಸಿದಿದೆ.

ಅಲ್ಲದೆ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿ ಕಳೆದ ವರ್ಷ ಅಲ್ಲಿನ ಜನರು ಭಾರೀ ಪ್ರತಿಭಟನೆ ನಡೆಸಿದ್ದರು. ಇಂದಿಗೂ ಆಹಾರ, ಔಷಧಿ, ಅಡುಗೆ ಅನಿಲ ಮತ್ತು ಇಂಧನ, ಟಾಯ್ಲೆಟ್ ಪೇಪರ್ ಮತ್ತು ಬೆಂಕಿಕಡ್ಡಿಗಳಂತಹ ಅಗತ್ಯ ವಸ್ತುಗಳ ತೀವ್ರ ಕೊರತೆಯು ಲಂಕಾವನ್ನು ಕಾಡುತ್ತಿದೆ. ಬಿಕ್ಕಟ್ಟಿನಿಂದ ಹೊರ ಬರಲು ಶ್ರೀಲಂಕಾ ಭಾರೀ ಪ್ರಯತ್ನಗಳನ್ನು ಮಾಡುತ್ತಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!