• Mon. Apr 29th, 2024

PLACE YOUR AD HERE AT LOWEST PRICE

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್, ನೆದರ್‌ಲ್ಯಾಂಡ್ಸ್‌ ವಿರುದ್ಧ ದೆಹಲಿಯಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ವೇಗದ ಶತಕ ಬಾರಿಸಿ ವಿಶ್ವದಾಖಲೆ ನಿರ್ಮಿಸಿದರು.

46.2ನೇ ಓವರ್‌ ಇದ್ದಾಗ ಅರ್ಧ ಶತಕ ಸಿಡಿಸಿದ್ದ ಮ್ಯಾಕ್ಸ್‌ವೆಲ್, 48.4 ಓವರ್‌ ವೇಳೆಗೆ ಭರ್ಜರಿ ಸಿಕ್ಸ್‌, ಫೋರ್‌ಗಳ ನೆರವಿನೊಂದಿಗೆ ಮುಂದಿನ 14 ಎಸೆತಗಳಲ್ಲಿ ಶತಕ ಪೂರೈಸಿದರು.

ವಿಶ್ವದಾಖಲೆಯ ಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸ್‌ನ ನೆರವಿನೊಂದಿಗೆ 106 ರನ್ ಗಳಿಸಿ 50ನೇ ಓವರ್‌ನಲ್ಲಿ ಔಟಾದರು.

ತನ್ನ ಈ ಐತಿಹಾಸಿಕ ಸಾಧನೆಯನ್ನು ಇತ್ತೀಚೆಗೆ ಜನಿಸಿದ ತನ್ನ ಮಗ ಲೋಗನ್ ಮೇವರಿಕ್ ಮ್ಯಾಕ್ಸ್‌ವೆಲ್‌ಗೆ ಅರ್ಪಿಸುವುದಾಗಿ ತಿಳಿಸಿದರು.

ನೆದರ್ಲ್ಯಾಂಡ್ಸ್ಗೆಲುವಿಗೆ ಕಠಿಣ ಗುರಿ

ಬುಧವಾರ(ಅ25) ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ತಂಡದ ವಿರುದ್ಧ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 399 ರನ್‌ಗಳನ್ನು ಗಳಿಸಿದ್ದು, ನೆದರ್‌ಲ್ಯಾಂಡ್ಸ್‌ ತಂಡಕ್ಕೆ 400 ರನ್‌ಗಳ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಆಸ್ಟ್ರೇಲಿಯಾ ತಂಡದ ಇನ್ನಿಂಗ್ಸ್ ಆರಂಭಿಸಿದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಉತ್ತಮ ಆರಂಭ ನೀಡಲಾಗಲಿಲ್ಲ. ಮಾರ್ಷ್ ಕೇವಲ 9 ರನ್ ಗಳಿಸಿ ಔಟಾದರು. ನಂತರ ಜೊತೆಯಾದ ಡೇವಿಡ್ ವಾರ್ನರ್ ಮತ್ತು ಸ್ಟೀವನ್ ಸ್ಮಿತ್ 2ನೇ ವಿಕೆಟ್‌ಗೆ 132 ರನ್‌ಗಳ ಜೊತೆಯಾಟ ನಿರ್ಮಿಸಿದರು.

ಸ್ಟೀವನ್ ಸ್ಮಿತ್ 68 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 71 ರನ್ ಗಳಿಸಿ ಔಟಾದರು. ಬಳಿಕ ಕ್ರೀಸ್‌ಗೆ ಆಗಮಿಸಿದ ಮಾರ್ನಸ್ ಲ್ಯಾಬುಶೈನ್ 47 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 62 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ಬ್ಯಾಟಿಂಗ್‌ಗೆ ಬಂದ ಜೋಶ್ ಇಂಗ್ಲಿಸ್ 12 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 14 ರನ್ ಗಳಿಸಿ ಔಟಾದರು.

ಡೇವಿಡ್ ವಾರ್ನರ್ ಸತತ ಎರಡನೇ ಶತಕ ಬಾರಿಸಿದರು. 93 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ 104 ರನ್ ಬಾರಿಸಿದರು. ವಿಶ್ವದಾಖಲೆಯ ಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಹಾಗೂ 8 ಭರ್ಜರಿ ಶತಕದ ನೆರವಿನೊಂದಿಗೆ 106 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ಔಟಾದರು. ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ತಲಾ 8 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ನೆದರ್‌ಲ್ಯಾಂಡ್ಸ್‌ ಪರ ಲೋಗನ್ ವ್ಯಾನ್ ಬೀಕ್ 10 ಓವರ್‌ಗಳಲ್ಲಿ 74 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಬಾಸ್ ಡಿ ಲೀಡ್ 10 ಓವರ್‌ಗಳಲ್ಲಿ 115 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಆರ್ಯನ್ ದತ್ 1 ವಿಕೆಟ್ ಪಡೆದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!