• Mon. Apr 29th, 2024

PLACE YOUR AD HERE AT LOWEST PRICE

ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ ಅ.28ರ ರಾತ್ರಿ ಸಂಭವಿಸಲಿದೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಿತ್ತು. ಇದಾದ ಕೇವಲ 14 ದಿನಗಳ ನಂತರ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ.

ವರ್ಷದ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28-29ರ ಮಧ್ಯರಾತ್ರಿ ಸಂಭವಿಸಲಿದೆ. ಭಾರತದ ಎಲ್ಲ ಸ್ಥಳಗಳಲ್ಲಿ ಗ್ರಹಣ ಗೋಚರಿಸುತ್ತದೆ. ಇದು ಭಾಗಶಃ ಚಂದ್ರಗ್ರಹಣವಾಗಿದೆ. ಅ.28 ರಾತ್ರಿ 11:30 ರಿಂದ ಮಧ್ಯರಾತ್ರಿ 3.36ಕ್ಕೆ ಗ್ರಹಣ ಕೊನೆಗೊಳ್ಳುತ್ತದೆ.

ಭಾಗಶಃ ಚಂದ್ರಗ್ರಹಣ ವೀಕ್ಷಿಸಲು ಗ್ರಹಣ ಕನ್ನಡಕಗಳಂತಹ ಅತ್ಯಾಧುನಿಕ ಉಪಕರಣಗಳನ್ನು ಹೊಂದುವ ಅಗತ್ಯವಿಲ್ಲ. ಇದನ್ನು ಬರಿಗಣ್ಣಿನಿಂದ ವೀಕ್ಷಿಸಬಹುದು. ಗ್ರಹಣ ವೀಕ್ಷಣೆಗೆ ನೆಹರು ತಾರಾಲಯದ ಯೂಟ್ಯೂಬ್​ನಲ್ಲಿ ಲೈವ್ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಮಧ್ಯರಾತ್ರಿ ಚಂದ್ರಗ್ರಹಣ ವೀಕ್ಷಣೆಗೂ ವ್ಯವಸ್ಥೆ ಮಾಡಲಾಗಿದೆ.

ಪಶ್ಚಿಮ ಪೆಸಿಫಿಕ್ ಮಹಾಸಾಗರ, ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಪೂರ್ವ ದಕ್ಷಿಣ ಅಮೆರಿಕ, ಈಶಾನ್ಯ ಉತ್ತರ ಅಮೆರಿಕ, ಅಟ್ಲಾಂಟಿಕ್ ಮಹಾಸಾಗರ, ಹಿಂದೂ ಮಹಾಸಾಗರ ಮತ್ತು ದಕ್ಷಿಣ ಪೆಸಿಫಿಕ್ ಮಹಾಸಾಗರದಲ್ಲಿ ಗ್ರಹಣ ಗೋಚರಿಸಲಿದೆ. ಭಾಗಶಃ ಚಂದ್ರಗ್ರಹಣವು ಮಧ್ಯರಾತ್ರಿಯ ಸುಮಾರಿಗೆ ಭಾರತದ ಎಲ್ಲ ಸ್ಥಳಗಳಲ್ಲಿ ಗೋಚರಿಸುತ್ತದೆ.

2025ರ ಸೆಪ್ಟೆಂಬರ್ 7 ರಂದು ಭಾರತದಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರವಾಗಲಿದೆ. ಇಡೀ ಚಂದ್ರನು ಭೂಮಿಯ ನೆರಳಿನಲ್ಲಿ ಬಂದಾಗ ಸಂಪೂರ್ಣ ಚಂದ್ರ ಗ್ರಹಣ ಸಂಭವಿಸುತ್ತದೆ. ಭಾರತದಲ್ಲಿ 2022 ರ ನವೆಂಬರ್ 8 ರಂದು ಕೊನೆಯ ಬಾರಿಗೆ ಪೂರ್ಣ ಚಂದ್ರ ಗ್ರಹಣ ಸಂಭವಿಸಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!