• Mon. Apr 29th, 2024

PLACE YOUR AD HERE AT LOWEST PRICE

ಕೋಲಾರ ನಗರದ ವಾಲ್ಮೀಕಿ ವೃತ್ತದಲ್ಲಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯಿತಿ ಹಾಗೂ ವಾಲ್ಮೀಕಿ ಸಮುದಾಯದ ಸಂಯುಕ್ತಶ್ರಯದಲ್ಲಿ ಇಂದು ಆದಿ ಕವಿ ,ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಬೃಹತ್ ಪಲ್ಲಕ್ಕಿಗಳ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು . ವಾಲ್ಮೀಕಿ ವೃತ್ತದಲ್ಲಿ ಡೊಳ್ಳು ಹೊಡೆಯುವ ಮೂಲಕ ಹಾಗೂ ನೂತನವಾಗಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು  ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ರವರು ಮೆರವಣಿಗೆಗೆ ಚಾಲನೆ ನೀಡಿದರು.

ವಿವಿಧ ಇಲಾಖೆಗಳು ಹಾಗೂ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದ 50ಕ್ಕೂ ಹೆಚ್ಚು ಪಲ್ಲಕ್ಕಿಗಳು ಹಾಗೂ ಜಾನಪದ ಕಲಾ ತಂಡಗಳು ನೋಡುಗರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಕೋಲಾರ ವಿಧಾನ ಪರಿಷತ್ ಶಾಸಕರಾದ MLC ಅನಿಲ್ ಕುಮಾರ್, ನಗರಸಭೆ ಸದಸ್ಯರಾದ ಏನ್, ಅಂಬರೀಶ್   ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪಂಚಾಯತಿ ಸಿಇಒ ಪದ್ಮ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!