• Mon. Apr 29th, 2024

PLACE YOUR AD HERE AT LOWEST PRICE

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರವಿವಾರ ರಾತ್ರಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ ಆಗಿದೆ. ಗಾಯಾಳುಗಳ ಸಂಖ್ಯೆ 100ಕ್ಕೆ ಏರಿಕೆ ಆಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ, ಗಾಯಾಳುಗಳಿಗೆ ತಲಾ ₹2 ಲಕ್ಷ ರೂ, ಬೇರೆ ರಾಜ್ಯದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಮತ್ತು ಬೇರೆ ರಾಜ್ಯದ ಗಾಯಾಳುಗಳಿಗೆ ತಲಾ 50 ಸಾವಿರ ರೂ. ನೀಡುವುದಾಗಿ ಸಿಎಂ ಜಗನ್ ಮೋಹನ್​ ರೆಡ್ಡಿ ಪರಿಹಾರ ಘೋಷಿಸಿದ್ದಾರೆ.

ರಕ್ಷಣಾ ಕಾರ್ಯ ಮುಂದುವರಿದ ಕಾರಣ 12 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ, 15 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 7 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಿಕರು ಆ ಪ್ರದೇಶದಲ್ಲಿ ಸಿಕ್ಕಿಹಾಕಿಕೊಳ್ಳದಂತೆ ಬಸ್ ವ್ಯವಸ್ಥೆಯನ್ನು ಮಾಡಿದ್ದೇವೆ. ಹಳಿಗಳನ್ನು ಭಾಗಶಃ ಸರಿಪಡಿಸಲಾಗಿದೆ. ಘಟನೆಯ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿಜಯವಾಡ-ಜಾರ್ಸುಗೂಡ ರೈಲು ಖರಗ್​​ಪುರ, ಮಂಗಳೂರು ಸೆಂಟ್ರಲ್​-ಸಂತ್ರಾಗಚ್ಚಿ ಎಕ್ಸ್​​ಪ್ರೆಸ್​ ರೈಲು ಹಾಗೂ ಬೆಂಗಳೂರು-ಜಾಸಿದಿಹ್​​ ಎಕ್ಸ್​ಪ್ರೆಸ್​ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಸಿಕಂದ್ರಾಬಾದ್​​-ಹೌರಾ ಫಲಕ್​​​​ಸುಮಾ ಎಕ್ಸ್​ಪ್ರೆಸ್​, ಸಿಕಂದ್ರಾಬಾದ್​​-ಹೌರಾ, ಚೆನ್ನೈ ಸೆಂಟ್ರಲ್​​​-ಹೌರಾ ಮೇಯಲ್, ವಾಸ್ಕೋಡಿಗಾಮಾ-ಷಾಲಿಮಾರ್​​ ಎಕ್ಸ್​ಪ್ರೆಸ್​ ಮಾರ್ಗವೂ ಬದಲಾವಣೆ ಮಾಡಲಾಗಿದ್ದು, ಹಲವು ಮಾರ್ಗಗಳ ಬದಲಾವಣೆಯಿಂದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ದುರಂತ ಸಂಭವಿಸಿದ ಬಳಿಕ ತಕ್ಷಣ ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸ್ಥಳದಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್‌ಗಳು ಬಿಡುಬಿಟ್ಟಿವೆ. ಅಲ್ಲದೇ, ಡಿಆರ್‌ಎಂ ಸೌರಭ್ ಪ್ರಸಾದ್ ಅವರು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಹಿರಿಯ ಅಧಿಕಾರಿಯ ಒಬ್ಬರ ಪ್ರಕಾರ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನಲ್ಲಿ ಮಾನವ ದೋಷ ಅಥವಾ ಸಿಗ್ನಲ್‌ನ ಓವರ್‌ಶೂಟ್‌ನಿಂದ ಅಪಘಾತ ಸಂಭವಿಸಿರಬಹುದು ಎಂದು ವರದಿಯಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!