• Sun. Apr 28th, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ಮೂರು ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಾಹಿತ್ಯದಲ್ಲಿ ಲಕ್ಷ್ಮೀಪತಿ ಕೋಲಾರ, ಶಿಕ್ಷಣದಲ್ಲಿ ಕೆ. ಚಂದ್ರಶೇಖರ, ಕ್ರೀಡೆಯಲ್ಲಿ  ಕು. ದಿವ್ಯ ಟಿ. ಎಸ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

68ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ರಾಜ್ಯ ಸರಕಾರವು ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಕೋಲಾರ ಜಿಲ್ಲೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂರು ಜನ ಸಾಧಕರು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಕರ್ನಾಟಕ ರಾಜ್ಯಸರ್ಕಾರವು 68 ನೇ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಾಜ್ಯದ ವಿವಿಧ ಜಿಲ್ಲೆಗಳ 68 ಜನ ಗಣ್ಯರಿಗೆ ಹಾಗೂ 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದೆ. ಇದರಲ್ಲಿ ಕೋಲಾರ ಜಿಲ್ಲೆಯ 3 ಜನ ಸಾಧಕರು ಸೇರಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ಸಂಸ್ಕೃತಿ ಸಂಶೋಧಕ ಲಕ್ಷ್ಮೀಪತಿ ಕೋಲಾರ , ಶಿಕ್ಷಣ ಕ್ಷೇತ್ರದಲ್ಲಿ ಕೆ. ಚಂದ್ರಶೇಖರ  ಮತ್ತು ಕ್ರೀಡಾ ಕ್ಷೇತ್ರದಲ್ಲಿ  ಕು. ದಿವ್ಯ ಟಿ. ಎಸ್ ಆಯ್ಕೆ ಆಗಿದ್ದಾರೆ.

ಲಕ್ಷ್ಮೀಪತಿ ಕೋಲಾರ, ನಾಲ್ಕು ದಶಕಗಳ ಕಾಲ ದಲಿತ ಚಳುವಳಿ ಹಾಗೂ ಅಹಿಂದ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ನೆಲ ಮೂಲದ ಕವಿ, ಸಂಸ್ಕೃತಿ ಸಂಶೋಧಕ, ನಾಟಕಕಾರ, ಚಲನಚಿತ್ರ ಸಾಹಿತಿ, ಹವ್ಯಾಸಿ ಪತ್ರಕರ್ತರಾಗಿ ತೊಡಗಿಸಿಕೊಂಡವರು. ಇವರು ಕೋಲಾರ ತಾಲ್ಲೂಕಿನ ಶಾಪೂರು ಗ್ರಾಮದವರು ‌.

ಇವರು 6 ನಾಟಕ, 4 ಕಾವ್ಯ, 1 ವಿಮರ್ಶಾ ಕಾದಂಬರಿ, 1 ಅಂಕಣ ಬರಹಗಳ ಸಂಗ್ರಹ, 7 ಸಂಶೋಧನಾ ಕೃತಿಗಳು, ಸುದ್ದಿ ಸಂಗಾತಿ ಸೇರಿ ಒಟ್ಟು 7 ಪತ್ರಿಕೆಗಳಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ. 8 ಚಲನಚಿತ್ರಗಳಿಗೆ ಚಿತ್ರ ಸಂಭಾಷಣೆ, 4 ಚಲನಚಿತ್ರಗಳಿಗೆ ಗೀತ ರಚನೆ, 14 ಸಾಕ್ಷ್ಯಚಿತ್ರಗಳ ಯೋಜನೆಯನ್ನು ನಿರೂಪಣೆ ಹಾಗೂ 7 ಸಾಕ್ಷ್ಯಚಿತ್ರ ನಿರ್ದೇಶನ ಮಾಡಿದ್ದಾರೆ. 13 ಪ್ರತಿಷ್ಠಿತ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪುರಸ್ಕøತರಿಗೆ ನಾಳೆ ಸಂಜೆ ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಫಲಕ, ಹಣ್ಣು, ಶಾಲು, ನೆನಪಿನ ಕಾಣಿಕೆ ನೀಡಿ ಗೌರವಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧೀನ ಕಾರ್ಯದರ್ಶಿಗಳು ಪಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ಚಂದ್ರಶೇಖರ್ ಕೋಲಾರ ತಾಲ್ಲೂಕು ಕ್ಯಾಲನೂರು ಗ್ರಾಮದವರು. ಸುಮಾರು ಐದು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇವರುಹಲವು ಶಿಕ್ಷಣ ಸಂಸ್ಥೆಗಳು ಹಾಗೂ ಸಂಘ ಸಂಸ್ಥೆಗಳ ಸಂಸ್ಥಾಪಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಇವರು ಮಾಡಿದ ಸಾಧನೆಯನ್ನು ಗುರುತಿಸಿ ಹಲವು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಇವರು ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳು ತರುವ ನಿಟ್ಟಿನಲ್ಲಿ ಹಲವಾರು ಸಂಘಟನೆಗಳಿಗೆ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಕುಮಾರಿ.ದಿವ್ಯ ಟಿ.ಎಸ್. ಮೂಲತಃ ಕೆಜಿಎಫ್ ಪಟ್ಟಣದವರು. ಕ್ರೀಡಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡುತ್ತಿದ್ದಾರೆ. 25 ಮೀ ಏರ್ ಪಿಸ್ತೂಲ್ ಶೂಟರ್ ಆಗಿ ಭಾರತ ದೇಶವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ.

ಪ್ರಸ್ತುತ 2023ನೇ ಸಾಲಿನಲ್ಲಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರಲ್ಲಿ ಏರ್ ಪಿಸ್ತೂಲ್ ಶೂಟರ್ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ ಚಿನ್ನದ ನಾಡಿನ ಚಿನ್ನದ ಹುಡುಗಿ.

ಪ್ರಶಸ್ತಿ ಪುರಸ್ಕೃತರಿಗೆ ನಾಳೆ ಸಂಜೆ ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಫಲಕ, ಹಣ್ಣು, ಶಾಲು, ನೆನಪಿನ ಕಾಣಿಕೆ ನೀಡಿ ಗೌರವಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧೀನ ಕಾರ್ಯದರ್ಶಿಗಳು ಪಕಟಣೆಯಲ್ಲಿ ತಿಳಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!