• Fri. May 3rd, 2024

PLACE YOUR AD HERE AT LOWEST PRICE

ಕೋಲಾರ:ಜಿಲ್ಲೆಯ ಕುಡಿಯುವ ನೀರಿನ ಬಹುದಿನಗಳ ಬೇಡಿಕೆಯ ಕನಸಿನ ಕೂಸು ಯರಗೋಳ  ಡ್ಯಾಂ ಯೋಜನೆಯನ್ನು ಇದೇ ನವೆಂಬರ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಿಳಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ಯರಗೋಳ ಡ್ಯಾಂ ಉದ್ಘಾಟನೆಗೆ ಮುಖ್ಯಮಂತ್ರಿ ಬಂಗಾರಪೇಟೆಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕೋಲಾರ ನಗರ, ಬಂಗಾರಪೇಟೆ, ಮಾಲೂರು ಹಾಗೂ 45 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಯರಗೋಳ ಡ್ಯಾಂ ಉದ್ಘಾಟನೆಗೆ ಸಂಬಂಧಿಸಿದಂತೆ ಹಲವು ತಿಂಗಳಿಂದ ಚರ್ಚೆ ಆಗಿದ್ದು, ನ.೧೦ರಂದು ಸಿಎಂ ಸಿದ್ದರಾಮಯ್ಯರ ಅಮೃತ ಹಸ್ತದಿಂದ ಉದ್ಘಾಟಿಸಲು ನಿರ್ಧಾರಿಸಲಾಗಿತ್ತು, ಆದರೆ ತೆಲಂಗಾಣಕ್ಕೆ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಹಾಜರಾಗಲು ಹೈಕಮಾಂಡ್ ಆದೇಶ ಬಂದ ಹಿನ್ನಲೆಯಲ್ಲಿ ನ.೧೧ಕ್ಕೆ ಮುಂದೂಡಲಾಗಿದೆಯೆಂದು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದ ಜೊತೆಗೆ ಕೋಲಾರದಲ್ಲಿ ಕೆ.ಡಿ.ಪಿ ಸಭೆಯನ್ನು ನಿಗದಿಪಡಿಸುವ ಕುರಿತು ಮುಖ್ಯ ಮಂತ್ರಿ ಬಳಿ ಪ್ರಸ್ತಾಪಿಸಿದಾಗ ಸಮಯದ ಆಭಾವ ಉಂಟಾಗಲಿದೆ ಬೇರೊಂದು ದಿನ ನಿಗದಿಪಡಿಸೋಣ, ಈಗ ಯರಗೋಳ ಡ್ಯಾಂ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ಸದ್ಯಕ್ಕೆ ಸಾಕು ಎಂದು ತಿಳಿಸಿದ್ದಾರೆಂದರು.

ಬಂಗಾರಪೇಟೆಯಿಂದ ೩೫ ಕಿ.ಮಿ. ಅಂತರದಲ್ಲಿರುವ ಡ್ಯಾಂಗೆ ಹೆಲಿಕ್ಯಾಪ್ಟರ್ ಮೂಲಕ ನೇರವಾಗಿ ಆಗಮಿಸುವ ನಿರೀಕ್ಷೆ ಇದೆ, ಸರ್ಕಾರ ರಚನೆ ಆದ ಮೇಲೆ ಕೋಲಾರಕ್ಕೆ ಎರಡನೇ ಭೇಟಿ ಇದಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ಸುಗೊಳಿಸಬೇಕು. ಯರಗೋಳ  ನೀರು ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ಮತ್ತು ಮಾರ್ಗಮದ್ಯೆ ೪೫ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಮೂರು ಕ್ಷೇತ್ರದ ಜನಪ್ರತಿನಿಧಿಗಳಿಗೆ ಹೆಚ್ಚಿನ ಜವಾಬ್ದಾರಿ ಇದೆ ಎಂದರು.

ಕಾರ್ಯಕ್ರಮಕ್ಕೆ  ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟಿಸಲು ಅಗತ್ಯ ಸಾರಿಗೆ ವ್ಯವಸ್ಥೆ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದ್ದು ಎರಡು ದಿನಗಳಲ್ಲಿ ಮಾಹಿತಿ ನೀಡಲಾಗುವುದೆಂದು ಸಭೆಗೆ ಹೇಳಿದರಲ್ಲದೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಊಟದ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಜೊತೆಗೆ ಮುಖ್ಯ ಮಂತ್ರಿಗಳು ಈ ಹಿಂದೆ ಕೋಲಾರದಲ್ಲಿ ಸ್ವರ್ಧಿಸಿಬೇಕೆಂದು ಕೊಂಡಿದ್ದ ಸಂದರ್ಭದಲ್ಲಿ ನೀಡಿದ್ದ ಹಲವು ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆಯೂ ಗಮನ ಸೆಳೆಯಬೇಕಾಗಿದೆ ಎಂದು ಹೇಳಿದರು.

ಇಂದು ಮುಖ್ಯ ಮಂತ್ರಿಗಳು ನಡೆಸಿದ ವಿಶೇಷ ಸಭೆಯಲ್ಲಿ ರೈತರಿಗೆ ನೀಡುತ್ತಿದ್ದ ೫ ಗಂಟೆಯ ೩ ಫೆಸ್ ವಿದ್ಯುತ್‌ನ್ನು ೭ ಗಂಟೆಗೆ ಹೆಚ್ಚಿಸಲು ಮತ್ತು ೨ ಸಾವಿರ ಮೆಗಾವ್ಯಾಟ್ ವಿದ್ಯುತ್‌ನ್ನು ೩ ಸಾವಿರಕ್ಕೆ ಏರಿಕೆ ಮಾಡಲು ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸುವ ಮೂಲಕ ರೈತರ ಬೇಡಿಕೆ ಪೂರೈಸಿರುವುದು ಸ್ವಾಗತಾರ್ಹವಾಗಿದೆ, ಇದೇ ರೀತಿ ಪ್ರತಿ ವಾರವೂ ಒಂದೊಂದು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲು ನಿರ್ಧಾರಿಸಲಾಗಿದೆ ಎಂದು ತಿಳಿಸಿದರು.

ಕೋಲಾರದ ಬಹು ದಿನದ ಕನಸಾಗಿದ್ದ ರಿಂಗ್‌ರೋಡ್ ಕಾಮಗಾರಿಗೆ ಸಂಬಂಧಿಸಿದಂತೆ ವಿಶೇಷ ಸಮಿತಿ ರಚಸಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಸೂಚಿಸಲಾಗಿದೆ. ಜೊತೆಗೆ ಕೋಲಾರದ ಅಭಿವೃದ್ದಿಗೆ ಅನುದಾನ ಬಿಡುಗಡೆಯ ಮನವಿಗೆ ಮುಖ್ಯ ಮಂತ್ರಿಗಳು ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ನುಡಿದರು.

ಕೋಲಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನೀಡಿದಾಗ ಅವರಿಗೂ ನಮ್ಮ ಜಿಲ್ಲೆಯ ಅಭಿವೃದ್ದಿಗೆ ಉತ್ತೇಜನ ನೀಡಿದಂತಾಗುವುದು, ಈ ಸಂಬಂಧವಾಗಿ ಎಂಎಲ್‌ಸಿ ಅನಿಲ್ ಕುಮಾರ್, ಶಾಸಕ ಕೊತ್ತೂರು ಮಂಜುನಾಥ್‌ರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ  ವಿಧಾನ ಪರಿಷತ್ತಿನ ಮಾಜಿ ಸಭಾಪತಿ  ವಿ.ಆರ್. ಸುದರ್ಶನ್, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಶ್ರೀಕೃಷ್ಣ, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಎಸ್ಸಿ ವಿಭಾಗದ ಅಧ್ಯಕ್ಷ ಕೆ.ಜಯದೇವ್ , ಜಿಲ್ಲಾ ಮಹಿಳಾ ಅಧ್ಯಕ್ಷೆ ರತ್ನಮ್ಮ, ಓಬಿಸಿ ರಾಜ್ಯ ಉಪಾಧ್ಯಕ್ಷೆ ನೀಲಾ ಸೋಮಶೇಖರ್ ಮುಖಂಡರಾದ ಅಬ್ದುಲ್‌ಖಯ್ಯೂಂ, ಅಥಾವುಲ್ಲಾ, ಹನೀಫ್, ಓಬಿಸಿ ಮಂಜುನಾಥ್, ನಾಗರಾಜ್, ನಗರಸಭೆ ಸದಸ್ಯ ಅಂಬರೀಷ್, ವಕ್ಕಲೇರಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ನಾರಾಯಣಮ್ಮ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಯಲ್ಲಪ್ಪ, ವೆಂಕಟಪತೆಪ್ಪ, ಖಾದ್ರಿಪುರ ಬಾಬು, ಸಾದಿಕ್ ಪಾಷ, ಸಲಾವುದ್ದೀನ್ ಬಾಬು, ಮುಂತಾದವರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!