• Fri. May 3rd, 2024

PLACE YOUR AD HERE AT LOWEST PRICE

ಬಂಗಾರಪೇಟೆ.ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಯರಗೋಳ ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ್ದರು, ಈಗ ಅವರೇ ಡ್ಯಾಂನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಇತರೇ ಪಕ್ಷಗಳ ನಾಯಕರ ಪಾತ್ರ  ಏನೂ ಇಲ್ಲ, ಇದು ಕಾಂಗ್ರೆಸ್ ಸರ್ಕಾರದ ಕೂಸು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಎಸ್.ಎನ್.ರೆಸಾರ್ಟ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಯರಗೋಳ  ಡ್ಯಾಂನಿಂದ ಮೂರು ತಾಲೂಕಿನ ಜನರಿಗೆ ಶುದ್ದವಾದ ಕುಡಿಯುವ ನೀರು ಸರಬರಾಜು ಮಾಡಲು ಸಿದ್ದವಾಗಿರುವಾಗ ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಯರಗೋಳ ಡ್ಯಾಂ ನಮ್ಮ ಕಾಲದಲ್ಲಿ ನಿರ್ಮಾಣವಾದ ಯೋಜನೆ. ಅದರ ಫಲ ನಮಗೆ ಸೇರಬೇಕಾಗಿದೆ  ಎಂದು ಇತ್ತೀಚಿಗೆ ಕೆಲ ದಿನಗಳಿಂದ ಬಿಟ್ಟಿ ಪ್ರಚಾರದಲ್ಲಿ ತೊಡಗಿರುವುದನ್ನು ಟೀಕಿಸಿದ ಶಾಸಕರು ೨೦೦೭ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಯೋಜನೆಗೆ ಹಸಿರು ನಿಶಾನೆ ನೀಡಿದರು.

ನಂತರ ಬಂದ ಸರ್ಕಾರಗಳು ಯೋಜನೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಹಾಗೂ ಅನುದಾನ ಸಹ ಬಿಡಗಡೆ ಮಾಡದೆ ಯೋಜನೆ ಸ್ಥಗಿತವಾಗಿತ್ತು,ಆಗ ಇದರ ಬಗ್ಗೆ ಯಾರೂ ಚಕಾರ ಎತ್ತಲಿಲ್ಲ.೨೦೧೩ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಡ್ಯಾಂ ನಿರ್ಮಾಣಕ್ಕೆ ಬೇಕಾಗಿದ್ದ ಜಾಗವನ್ನು ರೈತರಿಂದ ಹಾಗೂ ಅರಣ್ಯ ಇಲಾಖೆಯಿಂದ ವಶಕ್ಕೆ ಪಡೆದು ಡ್ಯಾಂ ನಿರ್ಮಾಣಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು ಎಂದರು. ಕಾಂಗ್ರೆಸ್ ಸರ್ಕಾರದಲ್ಲಿ ಡ್ಯಾಂ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಈಗ ಮತ್ತೆ ಸಿದ್ದರಾಮಯ್ಯ ಅವಧಿಯಲ್ಲಿ ಡ್ಯಾಂ ಲೋಕಾರ್ಪಣೆಯಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ನಗರಾಭಿವೃದ್ದಿ ಸಚಿವರಾಗಿದ್ದ ವಿನಯ್ ಕುಮಾರ್ ಸೊರಕೆರವರು ಯೋಜನೆ ವ್ಯರ್ಥ. ನೀರಿನ ಮೂಲಗಳಿಲ್ಲವೆಂದು ವರದಿ ನೀಡಿದ್ದರು. ಆದರೆ ನಾನು ಪಟ್ಟು ಬಿಡದೆ ಸರ್ಕಾರದಲ್ಲಿ ಹೋರಾಟ ಮಾಡಿ ಮತ್ತೆ ಜೀವ ಕೊಡಿಸಿದೆ. ಅದರ ಫಲವೇ ಇಂದು ಯರಗೋಳ ಡ್ಯಾಂ ಉದ್ಘಾಟನೆಯಾಗುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಕನಸಿನ ಕೂಸಲ್ಲವೆ ಎಂದು ವಿಕ್ಷಗಳ ನಾಯಕರನ್ನು ಪ್ರಶ್ನಿಸಿದರು.

ಯರಗೋಳ ಡ್ಯಾಂ ಇತಿಹಾಸದ ಬಗ್ಗೆ ಅರಿವಿಲ್ಲದವರು ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾತನಾಡುತ್ತಿರುವವರು ಮೊದಲು ಮಾಹಿತಿ ಪಡೆದು ಮಾತನಾಡಲಿ ಎಂದು ಸಲಹೆ ನೀಡಿದರು. ಒಟ್ಟು ೨೩೯ಕೋಟಿ ವೆಚ್ಚದಲ್ಲಿ ಡ್ಯಾಂ ನಿರ್ಮಾಣವಾಗಿದೆ. ದಿನಾಂಕ:11-11-2023ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಡ್ಯಾಂನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ಸಚಿವರು ಜಿಲ್ಲೆಯ ಶಾಸಕರು ಮಾಜಿ ಶಾಸಕ ಶ್ರೀನಿವಾಸಗೌಡ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಸುದಿಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಮುಖಂಡರಾದ ಶಂಷುದ್ದಿನ್ ಬಾಬು, ಚಂದು, ನಂಜಪ್ಪ, ಎಸ್.ಎ.ಪಾರ್ಥಸಾರಥಿ, ಸುಹೇಲ್, ಹೆಚ್.ಕೆ ನಾರಾಯಣಸ್ವಾಮಿ, ಗೋಪಾಲರೆಡ್ಡಿ, ಅ.ನಾ.ಹರೀಶ್ ಮತ್ತಿತರರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!