• Fri. May 3rd, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಮೂರು ಬಾರಿ ಶಾಸಕರಾಗಿ ಮಾಜಿ ಮುಖ್ಯಮಂತ್ರಿಗಳಾದ ಗುಂಡೂರಾವ್ ಮತ್ತು ಎಸ್.ಎಂ.ಕೃಷ್ಣರ ಆಪ್ತರಾಗಿದ್ದ ಮಾಜಿ ಶಾಸಕ ಬುವನಹಳ್ಳಿಯ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಿ.ವೆಂಕಟೇಶಪ್ಪ ನಿಧನರಾದರು. ಇವರ ಪಾರ್ಥೀವ ಶರೀರವನ್ನು ಸ್ವಗ್ರಾಮ ಬುವನಹಳ್ಳಿಗೆ ರವಾನೆ ಮಾಡಲಾಗಿದೆ.

ಸಿ.ವೆಂಟೇಶಪ್ಪ ತಾಲ್ಲೂಕಿನ ಬೂದಿಕೋಟೆ ಹೋಬಳಿ ಬುವನಹಳ್ಳಿಯವರಾಗಿದ್ದು  ಚಿಕ್ಕ ವಯಸ್ಸಿನಿಂದಲೇ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇವರು ಮೂರು ಬಾರಿ ಕಾಂಗ್ರೇಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

1999ರಲ್ಲಿ ಬಾರಿ ಮತಗಳ ಅಂತರದಿಂದ ಗೆದ್ದು ಶಾಸಕರಾಗಿದ್ದರು. 2001ರಲ್ಲಿ ಇವರ ಮೇಲೆ ಗುಂಡಿನ ದಾಳಿ ನಡೆದಿತ್ತಾದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಶಾಸಕ ಸ್ಥಾನದ ಅವಧಿ ಮುಗಿದ ನಂತರ ಇವರು ಕಾಂಗ್ರೇಸ್ ತೊರೆದಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!