• Wed. May 1st, 2024

PLACE YOUR AD HERE AT LOWEST PRICE

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ.

ಈತ ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ ಎಂದು ವರದಿಯಾಗಿದೆ. ಮಂಗಳೂರು ಏರ್‌ಪೋರ್ಟಿನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪ್ರಾಥಮಿಕ ಮಾಹಿತಿ ದೊರಕಿದೆ.

ಆರೋಪಿ ಪ್ರವೀಣ್ ಅರುಣ್ ಚೌಗಲೆಯ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ಉಡುಪಿಗೆ ಕರೆತರುತ್ತಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಕಳೆದ ಭಾನುವಾರ(ನ.12) ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಯೋರ್ವ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಇರಿದು ಹತ್ಯೆ ಮಾಡಿ, ಪರಾರಿಯಾಗಿದ್ದ. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಘಟನೆಯಲ್ಲಿ ಮನೆಯ ಯಜಮಾನಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಅಸೀಮ್ (14) ಕೊಲೆಯಾದವರು. ಘಟನೆಯಲ್ಲಿ ಮನೆಯ ಯಜಮಾನ ನೂರ್ ಮೊಹಮ್ಮದ್ ಅವರ ಚಿಕ್ಕಮ್ಮ ಹಾಜಿರಾ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೊಲೆ ಆರೋಪಿ ಪ್ರವೀಣ್‌ ಚೌಗಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದನು. ಮೃತಳಾದ ಹಸೀನಾಳ ಗಂಡ ಬೇರೆ ದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಈಕೆಯ ಇಬ್ಬರು ಮಕ್ಕಳು ಬೆಂಗಳೂರು ಮತ್ತು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಎಲ್ಲ ಕಚೇರಿಗಳಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ಉಡುಪಿಯ ಮನೆಗೆ ತೆರಳಿದ್ದರು.

ಈ ವೇಳೆ ಅವರ ಮನೆಗೆ ತೆರಳಿದ್ದ ಪ್ರವೀಣ್‌ ಚೌಗಲೆ, ಸಿಕ್ಕ ಸಿಕ್ಕವರನ್ನು ಚಾಕುವಿನಿಂದ ಕುತ್ತಿಗೆ ಹಾಗೂ ಎದೆ ಸೇರಿದಂತೆ ಸಿಕ್ಕ ಸಿಕ್ಕಲ್ಲೆಲ್ಲಾ ಕೊಯ್ದು ಕೊಲೆ ಮಾಡಿದ್ದನು. ಮಹಿಳೆ, ಮಕ್ಕಳು ಎನ್ನುವುದನ್ನೂ ನೋಡದೆ ಕೇವಲ 15 ನಿಮಿಷದಲ್ಲಿ ನಾಲ್ವರನ್ನು ಕೊಲೆಗೈದು ಪರಾರಿಯಾಗಿದ್ದನು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!