• Mon. May 6th, 2024

PLACE YOUR AD HERE AT LOWEST PRICE

”ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಎಚ್ ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!” ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ವಿಡಿಯೋ ಹಂಚಿಕೊಂಡು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ” ಎಂದು ವ್ಯಂಗ್ಯವಾಡಿದೆ.

“ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ! ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಖವಾಗಿ ಮಾತನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ʼಬರʼ ಎದುರಿಸುತ್ತಿದ್ದೀರಾ” ಎಂದು ಪ್ರಶ್ನಿಸಿದ್ದಾರೆ.

“ಅದೇನೋ ಪತ್ರಿಕಾಗೋಷ್ಠಿ ನಡೆಸಿ ʼಕರ್ನಾಟಕ ಕತ್ತಲಲ್ಲಿದೆʼ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?! ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ?,

ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ʼದಿವಾಳಿʼಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?” ಎಂದು ಕಾಂಗ್ರೆಸ್‌ ಕುಟುಕಿದೆ.

ಕುಮಾರಸ್ವಾಮಿ ಪ್ರತಿಕ್ರಿಯೆ:

ಕಾಂಗ್ರೇಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಹಬ್ಬಕ್ಕೆ ಮನೆಗೆ ದೀಪಾಲಂಕಾರ ಮಾಡಲು ಖಾಸಗಿ ಡೆಕೋರೇಷನ್ ಅವರಿಗೆ ಹೇಳಲಾಗಿತ್ತು. ಅವರು ಪರೀಕ್ಷೆ ಮಾಡಲು ಪಕ್ಕದ ವಿದ್ಯುತ್ ಕಂಬದಿಂದ ಸಂಪರ್ಕ ಪಡೆದಿಕೊಂಡಿದ್ದಾರೆ.

ಆಗ ನಾನು ಮನೆಯಲ್ಲಿರಲಿಲ್ಲ. ರಾತ್ರಿ ಮನೆಗೆ ಬಂದಾಗ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣ ಅದನ್ನು ತೆಗೆದು ನನ್ನ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿಸಿದ್ದೇನೆ.

ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂನವರು ಕೇಳಿದರೆ ದಂಡ ಕಟ್ಟುತ್ತೇನೆ. ಇದನ್ನು ಕಾಂಗ್ರೇಸ್ ನವರು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!