• Mon. May 6th, 2024

PLACE YOUR AD HERE AT LOWEST PRICE

ನೈಋತ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮವಾಗಿ ತಮಿಳುನಾಡಿನ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನೂ ಹಲವೆಡೆ ತುಂತುರು ಮಳೆಯಾಗುತ್ತಿದೆ.

ಮಂಗಳವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಭಾಗದಲ್ಲಿ ಭಾರೀ ಮಳೆಯಾಗಿದೆ. ಅರಿಯಲೂರು, ತಂಜಾವೂರು, ವಿಲ್ಲುಪುರಂ, ತಿರುವಣ್ಣಾಮಲೈ, ನಾಗಪಟ್ಟಿಣಂ, ತಿರುವರೂರು ಮತ್ತು ಕಡಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಬುಧವಾರವೂ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಚೆನ್ನೈನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

“121 ಬಹುಪಯೋಗಿ ಸುರಕ್ಷತಾ ಕೇಂದ್ರಗಳು ಸೇರಿದಂತೆ 4,967 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಶಾಲಾ-ಕಾಲೇಜುಗಳು, ಮದುವೆ ಮಂಟಪಗಳು ಮತ್ತು ಸಮುದಾಯ ಭವನಗಳನ್ನು ಪರಿಹಾರ ಕೇಂದ್ರಗಳಾಗಿ ಬಳಸಿಕೊಂಡು, ಜನರಿಗೆ ವಸತಿ ಕಲ್ಪಿಸಲು ಸಿದ್ಧತೆ ನಡೆಸಲಾಗಿದೆ.

ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ತಕ್ಷಣ ರಕ್ಷಣಾ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ” ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ರಾಮಚಂದ್ರನ್ ತಿಳಿಸಿದ್ದಾರೆ.

ಸರ್ಕಾರವು ಚೆನ್ನೈನಲ್ಲಿ 169 ಪರಿಹಾರ ಕೇಂದ್ರಗಳನ್ನು ಸಿದ್ಧಪಡಿಸಿದೆ ಮತ್ತು 260 ಹೈ-ಪವರ್ ಮೋಟಾರ್ ಪಂಪ್‌ಗಳು ರಕ್ಷಣಾ ಕಾರ್ಯಾಚರಣೆಗಾಗಿ ಸಿದ್ಧವಾಗಿವೆ ಎಂದು ಅವರು ಹೇಳಿದ್ದಾರೆ.

ಕಳೆದ ಒಂದೂವರೆ ತಿಂಗಳುಗಳಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದ ಸೃಷ್ಠಿಯಾಗಿತ್ತು. ತಮಿಳುನಾಡಿನಲ್ಲಿ ನೀರಿಲ್ಲವೆಂದು ಅಲ್ಲಿನ ಸರ್ಕಾರ ವಾದಿಸುತ್ತಿತ್ತು.

ತಮಿಳುನಾಡಿಗೆ ನೀರು ಹರಿಸಬೇಕೆಂದು ಪದೇ-ಪದೇ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶಿಸಿತ್ತು. ಇದೀಗ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!