PLACE YOUR AD HERE AT LOWEST PRICE
ಬಸ್ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ.
ಬುಧವಾರ ಬೆಳಗ್ಗೆ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 55 ಮಂದಿ ಪ್ರಯಾಣಿಸುತ್ತಿದ್ದ ಬಸ್ಸು ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 36 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.
ಸ್ಥಳೀಯರು, ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ದೋಡಾ ಮತ್ತು ಕಿಶ್ತ್ವಾರ್ನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ, ಗಾಯಾಳುಗಳನ್ನು ಸಾಗಿಸಲು ಹೆಲಿಕಾಪ್ಟರ್ ಸೇವೆಯನ್ನು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಬಸ್ ಕಿಶ್ತ್ವಾರ್ನಿಂದ ಜಮ್ಮುವಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣತಪ್ಪಿ, ದೋಡಾ ಅಸ್ಸಾರ್ ಪ್ರದೇಶದ ಟ್ರುಂಗಲ್ ಬಳಿ 300 ಮೀಟರ್ಗಳಷ್ಟು ಆಳದ ಕಂದಕಕ್ಕೆ ಉರುಳಿದೆ.