• Tue. May 7th, 2024

PLACE YOUR AD HERE AT LOWEST PRICE

ಪ್ರಜಾಪ್ರಭುತ್ವದ ಮೂಲ ಘಟಕ ಪಂಚಾಯತ್ ರಾಜ್ ವ್ಯವಸ್ಥೆಯಾಗಿದ್ದು, ಪ್ರಜಾಪ್ರಭುತ್ವ ಕೆಲಸ ಮಾಡುತ್ತಿರುವ ರೀತಿಯನ್ನು ಇಲ್ಲಿ ಕಾಣಬಹುದಾಗಿದೆ, ಬುದ್ದ, ಬಸವಣ್ಣ, ನಾರಾಯಣಗುರುಗಳ ತತ್ವದ ಮೇಲೆ ಪಂಚಾಯತ್ ರಾಜ್ ವ್ಯವಸ್ಥೆ ಸ್ಥಾಪನೆ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮಂಗಳೂರಿನ ಪುರಭವನದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

“ದೇಶ 21ನೇ ಶತಮಾನದಲ್ಲಿ ಮುಂದುವರೆದ ರಾಷ್ಟ್ರವಾಗಬೇಕು, ವಿಶ್ವದಲ್ಲಿ ಅಗ್ರಸ್ಥಾನ ಪಡೆಯಬೇಕು ಎಂದಾದರೆ, ಕೇವಲ ಸಂಸತ್ ನಲ್ಲಿ ಮಾಡುವ ನೀತಿಯಿಂದ ಅಷ್ಟೇ ಅಲ್ಲ, ನಮ್ಮ ಹಳ್ಳಿಗಳು, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರೆದಾಗ ಹಾಗೂ ಸಶಕ್ತಗೊಂಡಾಗ ಮಾತ್ರ ಸಾಧ್ಯ ಎಂದು ರಾಜೀವ್ ಗಾಂಧಿ ಅವರು ಸಂಸತ್ ನಲ್ಲಿ ಮಾಡಿರುವ ಭಾಸಣದಲ್ಲಿ ಅಂದೇ ಹೇಳಿದ್ದರು” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

“ಪಂಚಾಯತಿಗಳ ವ್ಯವಸ್ಥೆಯ ಬಗ್ಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯಕ್ರಮ ಹಾಕಿಕೊಳ್ಳಲು ನಿಮ್ಮಅನುಭವಗಳನ್ನು ಕೇಳಿದಾಗ ಮಾತ್ರ ಒಳ್ಳೆಯ ನೀತಿಗಳನ್ನು ರೂಪಿಸಲು ಸಾಧ್ಯವಾಗುತ್ತದೆ. ಏಕೆಂದರೆ ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ” ಎಂದರು.

“ಮುಂದಿನ ವರ್ಷದಿಂದ ಪಿಡಿಒಗಳ ಕೌನ್ಸೆಲಿಂಗ್ ಮಾಡಿ, ಪಂಚಾಯತಿ ಪರವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತೇವೆ. ಪಿಡಿಒಗಳಿಗೆ ಹೆಚ್ಚಿನ ಹೊಣೆಗಾರಿಕೆ ನೀಡಲಿದ್ದೇವೆ. ಪಿಡಿಒಗಳಿಗಾಗಿ ಬಯೋ ಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲು ಸಿದ್ದತೆ ಮಾಡಿಕೊಂಡಿದ್ದು ಹಾಜರಾತಿಗೆ ಅನುಗುಣವಾಗಿ ಸಂಬಳ ನೀಡಲಿದ್ದೇವೆ” ಎಂದು ತಿಳಿಸಿದರು.

“ಪಂಚತಂತ್ರ-2 ಎಂಬ ಹೊಸ ತಂತ್ರಜ್ಞಾನವನ್ನು ಆರಂಭಿಸುತ್ತಿದ್ದೇವೆ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತಿ ಸಭೆಗಳು ಸೇರಿದಂತೆ ಎಲ್ಲವನ್ನೂ ಪರಿಶೀಲಿಸಲು ಈ ತಂತ್ರಜ್ಞಾನ ವ್ಯವಸ್ಥೆಯಿಂದ ಅನುಕೂಲವಾಗಲಿದೆ” ಎಂದರು.

“ಮಲೆನಾಡು, ಕರಾವಳಿ ಭಾಗದಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿದೆ. ಈ ಸಮಸ್ಯೆಯ ನಿವಾರಣೆಗೆ ನಾವು ವಿಶೇಷ ವಾಟರ್ ಆಡಿಟ್ ಸಮಿತಿ ರಚಿಸಿ ಪರಿಹಾರಕ್ಕೆ ಮುಂದಾಗಿದ್ದು, ಈ ಮೂಲಕ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ” ಎಂದು ಹೇಳಿದರು.

ಕರ್ನಾಟಕ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಮಾಜಿ ಸಚಿವ ರಮಾನಾಥ ರೈ, ಶಾಸಕರಾದ ಮಂಜುನಾಥ ಭಂಡಾರಿ ಸೇರಿದಂತೆ ಮಾಜಿ ಸಚಿವರು, ಹಿರಿಯ ಮುಖಂಡರು ಹಾಗೂ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಪಕ್ಷದ ಪಂಚಾಯತ್ ಪ್ರತಿನಿಧಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!