• Fri. May 3rd, 2024

PLACE YOUR AD HERE AT LOWEST PRICE

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್‌ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ, ಪಕ್ಷದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಇಬ್ಬರು ಮಾಜಿ ಶಾಸಕರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ್ ಮತ್ತು ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಇಬ್ಬರೂ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸೇರಿದ್ದಾರೆ.

ಈ ಇಬ್ಬರ ಸೇರ್ಪಡೆಯಿಂದಾಗಿ ಕಾಂಗ್ರೆಸ್‌ಗೆ ಪ್ರಬಲ ನೆಲೆ ಇಲ್ಲದಿದ್ದ ಕ್ಷೇತ್ರಗಳಲ್ಲಿ ಬಲ ಬಂದಂತಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ಹಲವಾರು ಹಾಲಿ-ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದರು.

ಅರಸೀಕೆರೆ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ ತೊರೆದು, ಕಾಂಗ್ರೆಸ್‌ ಸೇರಿದ್ದರು. ಅದೇ ರೀತಿಯಲ್ಲಿ ಕೆ.ಆರ್‌ ಪೇಟೆಯಲ್ಲಿಯೂ ಜೆಡಿಎಸ್‌ ಮುಖಂಡ ದೇವರಾಜ್ ಅವರು ಕಾಂಗ್ರೆಸ್‌ ಸೇರಿ, ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಇಂತಹ ಪ್ರಹಸನಗಳ ನಡುವೆಯೂ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ, ಜೆಡಿಎಸ್ ತೊರೆಯುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ತುಮಕೂರು ಗ್ರಾಮೀಣ ಕ್ಷೇತ್ರದಲ್ಲಿ ತಮ್ಮದೇ ಪ್ರಾಬಲ್ಯ ಹೊಂದಿದ್ದ ಡಿಸಿ ಗೌರಿಶಂಕರ್ ಅವರು ಕಳೆದ ಚುನಾವಣೆಯಲ್ಲಿ 4,594 ಮತಗಳ ಅಂತರದಿಂದ ಸೋತಿದ್ದರು.

ಅದೇ ರೀತಿ, ಮಂಜುನಾಥ್ ಅವರು 9,194 ಮತಗಳ ಅಂತರದಿಂದ ಸೋಲುಂಡಿದ್ದರು. 2018ರ ಚುನಾವಣೆಯಲ್ಲಿ ಮಂಜುನಾಥ್ ಅವರು ಬಿಜೆಪಿಯ ಮುನಿರಾಜು ವಿರುದ್ಧ ಸ್ಪರ್ಧಿಸಿ, ಗೆದ್ದಿದ್ದರು. 2023ರ ಚುನಾವಣೆಯಲ್ಲಿ ಮುನಿರಾಜು ವಿರುದ್ಧ ಸೋಲುಂಡಿದ್ದರು.

ಈ ಇಬ್ಬರೂ ತಮ್ಮ ಕ್ಷೇತ್ರಗಳಲ್ಲಿ ಪ್ರಬಲರೇ ಆಗಿದ್ದಾರೆ. ಅವರಿಬ್ಬರೂ ಕಾಂಗ್ರೆಸ್‌ ಸೇರಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೇಸ್ ತನ್ ಬಲವನ್ನು ಹೆಚ್ಚಿಸಿಕೊಂಡಂತಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!