• Mon. Apr 29th, 2024

PLACE YOUR AD HERE AT LOWEST PRICE

ರಾತ್ರೋರಾತ್ರಿ ಪ್ರತ್ಯಕ್ಷವಾದ ‘ವಿದ್ಯುತ್ ಕಳ್ಳ ಮಾರಸ್ವಾಮಿ’ ಪೋಷ್ಟರ್!

ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ, ಬೆಂಗಳೂರಿನ ಜೆಡಿಎಸ್ ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್​ಗಳು ಮಂಗಳವಾರ ರಾತ್ರಿ ಪ್ರತ್ಯಕ್ಷವಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಲು ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

‘ಕರೆಂಟ್​ ಕದ್ದರೂ ಹೆಚ್​ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು’, ‘ಕುಮಾರಸ್ವಾಮಿಯವರೇ, 200 ಯುನಿಟ್​ ಉಚಿತವಾಗಿದೆ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ, ‘ಕರೆಂಟ್​ ಕಳ್ಳ ಕುಮಾರಸ್ವಾಮಿ’ ಎಂಬಿತ್ಯಾದಿ ಪೋಸ್ಟರ್​ಗಳನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಪ್ರಧಾನ ಕಚೇರಿ ‘ಜೆಪಿ ಭವನ’ದ ತಡೆಗೋಡೆಯಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಅಂಟಿಸಲಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಸುದ್ದಿಯಾಗಿದ್ದ 40 ಪರ್ಸೆಂಟ್ ಕಮಿಷನ್ ಆರೋಪದ ಬಳಿಕ, ಕಾಂಗ್ರೆಸ್ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಅಂಟಿಸಿದ್ದ ‘ಪೇಸಿಎಂ ಪೋಸ್ಟರ್’ ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!