PLACE YOUR AD HERE AT LOWEST PRICE
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೋಲಾರ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ 2023-24ನೇ ಸಾಲಿನ ವಿಶೇಷ ಘಟಕ ಉಪಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಬೇರೆ ಯಾವುದೇ ಉದ್ಯೋಗ ಮಾಡಬಾರದು. 12ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ತಲಾ ಒಬ್ಬ ಅಭ್ಯರ್ಥಿಗಳಿಗೆ ಮಾಸಿಕವಾಗಿ ತಲಾ 15,000 ರೂ.ಗಳ ಶಿಷ್ಯವೇತನ ನೀಡಲಾಗುವುದು.
ಅಭ್ಯರ್ಥಿಗಳು ಕೋಲಾರ ಜಿಲ್ಲೆಯವರಾಗಿರಬೇಕು. ಒಂದು ವೇಳೆ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ದೈಹಿಕವಾಗಿ ಸದೃಢರಾಗಿರಬೇಕು. ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಈ ಕಚೇರಿಯಲ್ಲಿ ಪಡೆದ ಅರ್ಜಿಯನ್ನು ಭರ್ತಿ ಮಾಡಿ ಡಿಸೆಂಬರ್ 1ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಕೋಲಾರ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 094480 88450, 9900844488 ಹಾಗೂ ಇ-ಮೇಲ್: vaarthailakhekolar@gmail.com ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.