• Mon. Apr 29th, 2024

PLACE YOUR AD HERE AT LOWEST PRICE

ಕೋಲಾರ ನವೆಂಬರ್ ೧೬ : ಮಕ್ಕಳೇ ಸಮಾಜದ ಅಡಿಪಾಯ, ಇಂತಹ ಅಡಿಪಾಯದಿಂದ ನಮ್ಮ ಕನಸನ್ನು ಸಾಕಾರಗೊಳಿಸಿಕೊಳ್ಳಬೇಕು. ಈ ದೆಸೆಯಲ್ಲಿ ಉತ್ತಮ ಸತ್ಪ್ರಜೆಗಳನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ ಲಕ್ಷ್ಮಿ ತಿಳಿಸಿದರು.

ಕೋಲಾರ ತಾಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಜವಹರಲಾಲ್ ನೆಹರು ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಮಾನವ ಹಕ್ಕು ಶಿಕ್ಷಣ ಬಗ್ಗೆ ಜಾಗೃತಿ ಮೂಡಿಸಿದ ನೆಹರುರವರು ಮಕ್ಕಳ ಹಕ್ಕು ಮತ್ತು ಕಾಳಜಿ ಹಾಗೂ ಶಿಕ್ಷಣ ವಿಚಾರದಲ್ಲಿ ಹೆಚ್ಚು ಒಲವು ಹೊಂದಿದ್ದರು. ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ತಮ್ಮ ಮೌಲ್ಯಗಳು ಎಂದು ಸಾರಿದ್ದ ನೆಹರು ಆಧುನಿಕ ಭಾರತದ ಶಿಲ್ಪಿ ಎಂದು ಬಣ್ಣಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಜಿ. ಶ್ರೀನಿವಾಸ್ ಮಾತನಾಡಿ ೧೯೫೬ ರಿಂದಲೇ ಮಕ್ಕಳ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಆಧುನಿಕ ಭಾರತದ ನಿರ್ಮಾತೃಗಳಾದ ಮಕ್ಕಳೇ ದೇಶದ ಸಂಪತ್ತು, ಅವರನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಭಾವಿಸಿ ಪ್ರತಿ ವರ್ಷ ಮಕ್ಕಳ ದಿನಾಚರಣೆ ಮೂಲಕ ಅವರಿಗೆ ಹೆಚ್ಚು ಸೌಲಭ್ಯಗಳನ್ನು ನೀಡುವಂತೆ ತಿಳಿಸಿದ ಮಹಾನ್ ದೇಶಪ್ರೇಮಿ ನೆಹರು ಎಂದರು.

ಈ ಸಂದರ್ಭದಲ್ಲಿ ಪಂಚಾಯಿತಿಯ ಎಂ.ಶೈಲಜಾ, ಬಿ.ಪಿ.ಮಂಗಮ್ಮ, ಸಹ ಶಿಕ್ಷಕರಾದ ಪಿ.ಎಮ್.ಗೋವಿಂದಪ್ಪ, ಎಂ ಆರ್ ಮೀನಾ, ಸ್ವಾತಿ ಮತ್ತಿತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!