• Fri. May 10th, 2024

PLACE YOUR AD HERE AT LOWEST PRICE

ಕೆಜಿಎಫ್:ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೩ನೇ ಸಾಲಿನ ಅಪರಾಧ ತಡೆ ಮಾಸಾಚರಣೆಯ ಕಾರ್ಯಕ್ರಮದ ಅಂಗವಾಗಿ, ಕೆಜಿಎಫ್ ನಗರ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮೀಣ ಪ್ರದೇಶಗಳಲ್ಲಿನ ಶಾಲಾ, ಕಾಲೇಜು, ಆಟೋ ಮತ್ತು ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ಅಪರಾಧಗಳನ್ನು ತಡೆಗಟ್ಟುವ ಕುರಿತು ಜನಜಾಗೃತಿ ಕಾರ್ಯಕ್ರಮವು ನಡೆಯಿತು.

ಕೆಜಿಎಫ್ ಘಟಕದ ಕಾಮಸಮುದ್ರಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅಪ್ರಾಪ್ತ ವಿದ್ಯಾರ್ಥಿಗಳಿಂದ ವಾಹನ ಚಾಲನೆಯಿಂದಾಗುವ ಅನಾಹುತಗಳ ಕುರಿತು ಜನಜಾಗೃತಿ ಕಾರ್ಯಕ್ರಮದಲ್ಲಿ ಪಿಎಸ್‌ಐ ಕಿರಣ್‌ಕುಮಾರ್ ತಿಳುವಳಿಕೆ ಮೂಡಿಸಿದರು.

ಬೆಮೆಲ್‌ನಗರದ ಆಲದಮರದ ವೃತ್ತದಲ್ಲಿ ಪಿಎಸ್‌ಐ ವಿದ್ಯಾಶ್ರೀ  ಆಟೋ ಚಾಲಕರಿಗೆ ಜಾಗೃತಿ ಮೂಡಿಸಿದರು. ಕ್ಯಾಸಂಬಳ್ಳಿ ಬಸ್‌ನಿಲ್ದಾಣದ ವೃತ್ತದಲ್ಲಿ ಪಿಎಸ್‌ಐ ಶ್ಯಾಮಲಾ ಅವರು, ಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬೇತಮಂಗಲ ಸಿಪಿಐ ಸುರೇಶ್‌ರಾಜು, ಪಿಎಸ್‌ಐ ದೇವರಾಜ್ ಮತ್ತು ಕಾಮಸಮುದ್ರಂ ಸರಹದ್ದು ಬೋಡೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪಿಎಸ್‌ಐ ಕಿರಣ್‌ಕುಮಾರ್ ಅವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.

ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಮಾಜದಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದೆಯೆಂದರು. ಮಾದಕ ವಸ್ತುಗಳಿಂದ ಆಗುವಂತಹ ಅನಾಹುತಗಳ ಬಗ್ಗೆ, ಪೋಕ್ಸೋ ಕಾಯ್ದೆಯ ಕುರಿತು, ಬಾಲ್ಯ ವಿವಾಹ ನಿರ್ಮೂಲನೆ, ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕುರಿತು ಕಾನೂನು ಅರಿವು ಮೂಡಿಸಿದರು. ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತೆ ಕುರಿತು ಇದೇ ಸಂದರ್ಭದಲ್ಲಿ ವಿವರಿಸಿ, ವಿದ್ಯಾರ್ಥಿಗಳಿಗೆ ಅಗತ್ಯ ತಿಳುವಳಿಕೆ ನೀಡಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!