• Mon. Apr 29th, 2024

ತೆಲಂಗಾಣ:ಅಕ್ಬರುದ್ದೀನ್ ಓವೈಸಿ ಹಂಗಾಮಿ ಸ್ಪೀಕರ್;ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು.

PLACE YOUR AD HERE AT LOWEST PRICE

ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದನ್ನು ವಿರೋಧಿಸಿ ತೆಲಂಗಾಣ ಬಿಜೆಪಿಯ ನೂತನ ಶಾಸಕರು ಪ್ರಮಾಣ ವಚನ ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸುವ ಕಾರ್ಯಕ್ರಮ ಇಂದು(ಡಿ.9) ಏರ್ಪಡಿಸಲಾಗಿತ್ತು. ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿದ ರಾಜ್ಯಪಾಲರು ಅವರಿಗೆ ಪ್ರಮಾಣ ವಚನ ಬೋಧಿಸುವ ಜವಬ್ದಾರಿ ನೀಡಿದ್ದರು.

ಕಾಂಗ್ರೆಸ್ ಮತ್ತು ಬಿಆರ್‌ಎಸ್‌ ಪಕ್ಷದ ಶಾಸಕರು ಇಂದು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಹೈದರಾಬಾದ್‌ನ ಗೋಶಮಹಲ್ ಕ್ಷೇತ್ರದ ಶಾಸಕ ಟಿ. ರಾಜಾಸಿಂಗ್, “ನನ್ನ ಉಸಿರು ಇರುವವರೆಗೆ ಎಂಐಎಂ ನಾಯಕನ ಮುಂದೆ ಪ್ರಮಾಣ ವಚನ ಸ್ವೀಕರಿಸುವುದಿಲ್ಲ. ಪೂರ್ಣಾವಧಿ ಸ್ಪೀಕರ್ ನೇಮಕವಾದ ಬಳಿಕವಷ್ಟೇ ಪ್ರಮಾಣ ವಚನ ಸ್ವೀಕರಿಸುವುದಾಗಿ” ವಿಡಿಯೋ ಮೂಲಕ ಹೇಳಿದ್ದಾರೆ.

“ಹಿಂದೂ ವಿರೋಧಿ ಹೇಳಿಕೆ ನೀಡಿರುವ ವ್ಯಕ್ತಿ(ಅಕ್ಬರುದ್ದೀನ್ ಓವೈಸಿ) ಮುಂದೆ ನಾನು ಪ್ರಮಾಣ ವಚನ ಸ್ವೀಕರಿಸಬಹುದೇ?” ಎಂದು ಟಿ. ರಾಜಾಸಿಂಗ್ ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಮಾತನಾಡಿ, “ಹಿರಿಯ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಸಂಪ್ರದಾಯಕ್ಕೆ ವಿರುದ್ಧವಾದ ಓವೈಸಿ ನೇಮಕವನ್ನು ಬಿಜೆಪಿ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

“ಹಂಗಾಮಿ ಸ್ಪೀಕರ್ ಮುಂದೆ ಬಿಜೆಪಿ ಶಾಸಕರು ಪ್ರಮಾಣ ಸ್ಚೀಕರಿಸುವುದಿಲ್ಲ. ಪೂರ್ಣಾವಧಿ ಸ್ಪೀಕರ್ ನೇಮಕವಾದ ನಂತರವಷ್ಟೇ ನಮ್ಮ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಎಐಎಂಐಎಂ ಪಕ್ಷದೊಂದಿಗೆ ನಾವು ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ನಾವು ರಾಜ್ಯಪಾಲರ ಬಳಿ ಹೋಗುತ್ತೇವೆ” ಎಂದು ಕಿಶನ್ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜಾ ಸಿಂಗ್ 2018 ರಲ್ಲೂ ಎಂಐಎಂ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಕ್ಕೆ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದ್ದರು.

“ತೆಲಂಗಾಣದ ಹೊಸ ಮುಖ್ಯಮಂತ್ರಿಯಾಗಿರುವ ಕಾಂಗ್ರೆಸ್‌ನ ರೇವಂತ್ ರೆಡ್ಡಿ ಅವರು ಮಾಜಿ ಸಿಎಂ ಕೆ ಚಂದ್ರಶೇಖರ ರಾವ್ ಅವರಂತೆ ಎಐಎಂಐಎಂಗೆ ಹೆದರುತ್ತಾರೆ. ಹೀಗಾಗಿ ಅಕ್ಬರುದ್ದೀನ್ ಓವೈಸಿಗೆ ಹಂಗಾಮಿ ಸ್ಪೀಕರ್ ಆಗಲು ಅವಕಾಶ ನೀಡಿದ್ದಾರೆ” ಎಂದು ರಾಜಾಸಿಂಗ್ ಆರೋಪಿಸಿದ್ದಾರೆ.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!