• Sat. May 11th, 2024

PLACE YOUR AD HERE AT LOWEST PRICE

ಕೋಲಾರ: ಶತಶೃಂಗ ಪರ್ವತವನ್ನು ದೇಶದ ಗಮನ ಸೆಳೆಯುವ ರೀತಿಯಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಿ, ಪರ್ವತದ ಮೇಲಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅಂತರಗಂಗೆ ಬೆಟ್ಟಕ್ಕೆ ರೂಫ್‌ವೇ ನಿರ್ಮಾಣಕ್ಕೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರಕ್ಕೆ ಡಿ.೨೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮದ ಹಿನ್ನಲೆಯಲ್ಲಿ ತೇರಹಳ್ಳಿ ಬೆಟ್ಟದ ರಸ್ತೆ ಅಭಿವೃದ್ಧಿ ಸೇರಿದಂತೆ ಸುಮಾರು ೩.೬೦ ಕೋಟಿ ರೂ.ಗಳ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು.

ಈ ಬಾರಿಯ ಹುಣ್ಣಿಮೆ ಹಾಡು ಕಾರ್ಯಕ್ರಮವು 200 ಸಂಚಿಕೆಗಳನ್ನು ಪೂರ್ಣಗೊಳಿದ ಹಿನ್ನಲೆಯಲ್ಲಿ ತೇರಹಳ್ಳಿ ಬೆಟ್ಟದ ಆದಿಮ ಕೇಂದ್ರದಲ್ಲಿ ದಕ್ಷಿಣ ಭಾರತ ರಾಜ್ಯಗಳ ಕಲಾ ತಂಡಗಳಿಂದ ಮೂರು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ತಂಡ ಆಗಮಿಸುವ ಹಿನ್ನಲೆಯಲ್ಲಿ ತೇರಹಳ್ಳಿ ಬೆಟ್ಟದ ರಸ್ತೆ ಅಗಲೀಕರಣ ನಡೆಯುತ್ತಿದ್ದು, ಅದನ್ನು ವೀಕ್ಷಿಸಿದ ಶಾಸಕ ಕೊತ್ತೂರು ಮಂಜುನಾಥ್ ೨೭ರ ಒಳಗಾಗಿ ರಸ್ತೆ ಅಗಲೀಕರಣ ಆಗಲಿದೆ ಎಂದರು.

ಇದೇ ಪ್ರಥಮ ಬಾರಿಗೆ ನಾನು ಆದಿಮ ಕೇಂದ್ರಕ್ಕೆ ಭೇಟಿ ನೀಡಿದ್ದೇನೆ. ಇದು ಶತಶೃಂಗ ಪರ್ವತ ಎಂದು ಕರೆಯಲಾಗಿದೆ. ಈ ಬೆಟ್ಟದ ಮೇಲೆ ಇರುವ ಶಿವನ ದೇವಸ್ಥಾನ ಅಭಿವೃದ್ಧಿ ಸೇರಿದಂತೆ ಇರುವ ೭ ಗ್ರಾಮಗಳ ಜನರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ಒತ್ತುವರಿಯಾಗಿರುವ ರಸ್ತೆಯನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಹಿರಿಯ ಮುಖಂಡ ಸಿ.ಎಂ ಮುನಿಯಪ್ಪ, ಆದಿಮ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಎನ್ ಮುನಿಸ್ವಾಮಿ, ಖಜಾಂಚಿ ಹ.ಮಾ ರಾಮಚಂದ್ರ, ಕೊಂಡರಾಜನಹಳ್ಳಿ ಗ್ರಾಪಂ ಅಧ್ಯಕ್ಷ ವಿಜಯನಗರ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಗೊಲ್ಲಹಳ್ಳಿ ಶಿವಪ್ರಸಾದ್, ಅಂಬರೀಶ್, ವಡಗೂರು ರಾಮು, ಮುಂತಾದವರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!