• Sun. May 5th, 2024

PLACE YOUR AD HERE AT LOWEST PRICE

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ 30 ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿತ್ತು. ಇದೀಗ ರಾಜ್ಯ ಸಭೆಯಿಂದ ಕೂಡ 46 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಒಟ್ಟು 90 ಸಂದರನ್ನು ಅಧಿವೇಶನದಿಂದ ಅಮಾನತು ಮಾಡಲಾಗಿದ್ದು, ಲೋಕಸಭೆಯ ಇತಿಹಾಸದಲ್ಲೇ ಅಚ್ಚರಿಯ ಬೆಳವಣಿಗೆ ಎಂದು ಹೇಳಲಾಗಿದೆ.

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇದಲ್ಲದೆ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿತ್ತು. ಇಂದು ಬೆಳಿಗ್ಗೆ ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದ 30 ಸಂಸದರನ್ನು ಅಮಾನತು ಮಾಡಲಾಗಿತ್ತು. ರಾಜ್ಯ ಸಭೆಯಲ್ಲೂ ಪ್ರತಿಪಕ್ಷಗಳ ಸಂಸದರು ಅಮಿತ್‌ ಶಾ ಹೇಳಿಕೆಗೆ ಪಟ್ಟು ಹಿಡಿದಿದ್ದು ರಾಜ್ಯ ಸಭೆಯಿಂದ ಕೂಡ 46 ಸಂಸದರನ್ನು ಅಮಾನತು ಮಾಡಲಾಗಿದೆ.

ರಾಜ್ಯಸಭೆಯಿಂದ ಕಾಂಗ್ರೆಸ್‌ನ ಜೈರಾಮ್ ರಮೇಶ್, ರಣದೀಪ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಸೇರಿ 46 ಸಂಸದರನ್ನು ಅಮಾನತು ಮಾಡಲಾಗಿದೆ.

ಲೋಕಸಭೆಯಿಂದ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು  ಉಪನಾಯಕ ಗೌರವ್ ಗೊಗೊಯ್, ತೃಣಮೂಲ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕಾಕೋಲಿ ಘೋಷ್ ದಸ್ತಿದಾರ್, ಸೌಗತ ರೇ, ಸತಾಬ್ದಿ ರಾಯ್ ಮತ್ತು ಡಿಎಂಕೆ ಸಂಸದರಾದ ಎ ರಾಜಾ ಮತ್ತು ದಯಾನಿಧಿ ಮಾರನ್ ಸೇರಿದ್ದಾರೆ.

ಅಮಾನತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅಧೀರ್ ರಂಜನ್ ಚೌಧರಿ, ಸರ್ಕಾರವು ಸರ್ವಾಧಿಕಾರದ ರೀತಿಯಲ್ಲಿ ವರ್ತಿಸುತ್ತಿದೆ ಮತ್ತು ಸಂಸತ್ತನ್ನು ಬಿಜೆಪಿ ಪ್ರಧಾನ ಕಚೇರಿಯಂತೆ ಪರಿಗಣಿಸುತ್ತಿದೆ. ಅಧಿವೇಶನ ಆರಂಭವಾದಾಗಿನಿಂದ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿವೆ. ಆದರೆ ಸರಕಾರವು ಸರ್ವಾಧಿಕಾರದ ಉತ್ತುಂಗವನ್ನು ಮೀರಿದೆ. ಅವರಿಗೆ ಬಹುಮತವಿದೆ, ಅವರು ಅಧಿಕಾರವನ್ನು ಹಿಡಿದಿದ್ದಾರೆ. ಅವರು ಸಂಸತ್ತನ್ನು ಪಕ್ಷದ ಕಚೇರಿಯಂತೆ ನಡೆಸಲು ಬಯಸುತ್ತಾರೆ. ಆದರೆ ಅದು ಸಂಭವಿಸಬಾಹಿರ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೌರವ್ ಗೊಗೊಯ್, ಬಿಜೆಪಿ ಸರ್ಕಾರವು ಪ್ರತಿಪಕ್ಷಗಳನ್ನು ಕೆಡವಲು ಪ್ರಯತ್ನಿಸುತ್ತಿದೆ ಮತ್ತು ಗೃಹ ಸಚಿವರು ಭದ್ರತಾ ಲೋಪದ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ಲೋಕಸಭೆಯ ಹೊರಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!