• Thu. May 9th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಡಿ.೨೦.ಜನರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತವನ್ನುಜನರ ಬಳಿ ತೆಗೆದುಕೊಂಡು ಹೋಗಬೇಕೆಂಬ ದೃಷ್ಟಿಯಿಂದ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಬಂಗಾರಪೇಟೆ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ  ಹೇಳಿದರು.

ಇಂದ ಬಂಗಾರಪೇಟೆ ಪುರಸಭಾ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನರ ಸಮಸ್ಯೆ ಬಗೆಹರಿಸಲು ಆಡಳಿತವನ್ನು ಜನರ ಬಳಿ ತೆಗೆದುಕೊಂಡು ಹೋಗಬೇಕೆಂಬ ದೃಷ್ಟಿಯಿಂದ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲು ಜಿಲ್ಲಾಡಳಿತ ನಿಮ್ಮ ಬಳಿ ಬಂದಿದೆ ಎಂದರು.

ಸರ್ಕಾರ ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ, ನುಡಿದಂತೆ ನಡೆದಿದ್ದೇವೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಪ್ರತಿ ಮನೆಗೂ ಉಚಿತ ವಿದ್ಯುತ್, ಬಿ.ಪಿ.ಎಲ್ ಕಾರ್ಡ್ಗೆ ತಲಾ ಹತ್ತು ಕೆಜಿ ಅಕ್ಕಿ, ಮನೆ ಯಜಮಾನಿಗೆ ಎರಡು ಸಾವಿರ ನೀಡುತ್ತಿದ್ದೇವೆ, ಯುವಕ ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಯುವ ನಿಧಿ ಯೋಜನೆಯನ್ನು ಇನ್ನೇನು ಜಾರಿಗೆ ತರಲಾಗುತ್ತಿದೆ ಎಂದರು.

ಗ್ಯಾರಂಟಿಗಳ ಜೊತೆಯಲ್ಲಿ ಹೊಸ ಪ್ರಯತ್ನವಾಗಿ ಜನತಾದರ್ಶನ ಕಾರ್ಯಕ್ರಮವನ್ನು ಪ್ರತಿ ತಾಲ್ಲೂಕಿನಲ್ಲಿ ಆಯೋಜನೆ ಮಾಡಲಾಗುತ್ತಿದೆ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿ ಮತ್ತೆ ಕೆಲವನ್ನು ಎರಡು ಮೂರು ದಿನಗಳಲ್ಲಿ ಇನ್ನು ಕೆಲವನ್ನು ಕಾಲಮಿತಿಯೊಳಗೆ  ಬಗೆಹರಿಸಲಾಗುವುದು ಎಂದರು.

ಎಲ್ಲಾ ಇಲಾಖೆಗಳಲ್ಲಿಯೂ ಸರ್ಕಾರ ನೀಡುವ ಸೌಲಭ್ಯಗಳನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ರಾಜ್ಯ ಸರ್ಕಾರ ಜನಪರ, ಬಡವರ ಪರ, ರೈತರ ಪರ, ಹಿಂದುಳಿದ ವರ್ಗದವರ ಪರ ಸರ್ಕಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪದ್ಮ ಬಸವಂತಪ್ಪ, ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮಿ, ತಹಸೀಲ್ದಾರ್ ರಶ್ಮಿ, ಡಿವೈಎಸ್‌ಪಿ ಪಾಂಡುರಂಗ, ಇಒ ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎನ್. ಸುಕನ್ಯ ಸೇರಿದಂತೆ ಎಲ್ಲಾ ಪುರಸಭಾ ಸದಸ್ಯರು, ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!