• Sat. Apr 27th, 2024

PLACE YOUR AD HERE AT LOWEST PRICE

ಕೆಜಿಎಫ್:ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಕೆಜಿಎಫ್ ಪೊಲೀಸ್ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ಕಿರುನಾಟಕ, ರಸಪ್ರಶ್ನೆ, ನಿರೂಪಣೆ ಮತ್ತು ಚರ್ಚಾ ಸ್ಪರ್ಧೆ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು.

ರಾಬರ್ಟ್ಸನ್‌ಪೇಟೆಯ ಭಗವಾನ್ ಶ್ರೀ ಮಹಾವೀರ್ ಜೈನ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿರುವುದರಿಂದ, ಪ್ರತಿಯೊಬ್ಬ ವಿದ್ಯಾರ್ಥಿಯು ಮಾದಕ ದ್ರವ್ಯ, ಮಾದಕ ವಸ್ತುಗಳಿಂದ ದೂರ ಉಳಿಯಬೇಕು. ಮಾದಕ ವ್ಯಸನಿಗಳಾಗಬಾರದು.

ಭವಿಷ್ಯತ್ತಿನ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳನ್ನು ಬಳಸಬಾರದೆಂದರು. ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳ ಮಾರಾಟ, ಬಳಸುವಿಕೆಯನ್ನು ತಡೆಯುವಲ್ಲಿ ಯುವಜನತೆಯು ಪ್ರಮುಖ ಪಾತ್ರ ವಹಿಸಿ, ಮಾದಕ ವಸ್ತುಗಳ ಮುಕ್ತ ಸಮಾಜವನ್ನು ನಿರ್ಮಿಸಲು ಕರೆ ನೀಡಿದರು.

೨೦೨೩ನೇ ಸಾಲಿನ ಅಪರಾಧ ತಡೆ ಮಾಸಾಚರಣೆಯ ಕಾರ್ಯಕ್ರಮದ ಅಂಗವಾಗಿ, ನಗರ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆ ಮತ್ತು ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವು ನಡೆಸಲಾಗಿತ್ತು, ಸಮಾಜದಲ್ಲಿ ಮಾದಕ ವಸ್ತುಗಳನ್ನು ತಡೆಗಟ್ಟಲು ಯುವಜನತೆ ಸಹಕಾರವು ಅತ್ಯವಶ್ಯಕವಾಗಿದೆಯೆಂದರು.

ಇದೇ ಸಂದರ್ಭದಲ್ಲಿ ಮಾದಕ ವಸ್ತುಗಳನ್ನು ಬಳಸುವುದಿಲ್ಲವೆಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕೆ.ಜಿ.ಎಫ್ ಜಿಲ್ಲೆಯ ಡಾ|| ಟಿ.ತಿಮ್ಮಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಿವೈಎಸ್ಪಿ ಪಾಂಡುರಂಗ  ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ದ ಜಾಗೃತಿಯನ್ನು ಮೂಡಿಸಿ, ಪ್ರಬಂಧ ಸ್ಪರ್ಧೆ ನಡೆಸಿದರು.

ಬೇತಮಂಗಲ ಸರಹದ್ದು ಬಂಗಾರುತಿರುಪತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಇಎನ್ ಇನ್ಸ್ಪೆಕ್ಟರ್ ಲಕ್ಷ್ಮೀನಾರಾಯಣ  ವಿಶೇಷ ಕಾರ್ಯಕ್ರಮ ನಡೆಸಿದರು. ಡಿ.ಸಿ.ಆರ್.ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಎ. ಲಿಂಗಾರೆಡ್ಡಿ  ಬಂಗಾರಪೇಟೆ ನವಚೇತನ ಪಧವಿ ಕಾಲೇಜು, ಬಂಗಾರಪೇಟೆ ಪಿ.ಎಸ್.ಐ ರಾಜಣ್ಣ  ಕೆ.ಸಿ ರೆಡ್ಡಿ ಪ್ರಥಮ ದರ್ಜೆ ಕಾಲೇಜು, ಆಂಡ್ರಸನ್‌ಪೇಟೆ ಪಿ.ಎಸ್.ಐ ಮಂಜುನಾಥ. ಬಿ ಇವರು ಸೆಂಟ್ ಮೇರಿಸ್ ಪ್ರೌಡ ಶಾಲೆ, ಉರಿಗಾಂ.

ಪಿ.ಎಸ್.ಐ ಗುರುರಾಜ ಚಂತಾಕಲ ಕೆ.ಜಿ.ಎಫ್ ಫ್ರಥಮ ದರ್ಜೆ ಕಾಲೇಜು, ಕಾಮಸಮುದ್ರಂ ಪಿ.ಎಸ್.ಐ ವೆಂಕಟಮುನಿಯಪ್ಪ ರವರು ಕಾಮಸಮುದ್ರಂನ ಸರ್ಕಾರಿ ಪಿ.ಯು ಕಾಲೇಜ್, ಬೂದಿಕೋಟೆ ಪಿ.ಎಸ್.ಐ ಸುರೇಶ್‌ಸಿಂಗ್ ರವರು ಬೂದಿಕೋಟೆ ಸರ್ಕಾರಿ ಪಿ.ಯು ಕಾಲೇಜ್ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಚಿತ್ರಕಲೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಿರುತ್ತಾರೆ.

ಕೆಜಿಎಫ್ ಘಟಕದ ಬೆಮೆಲ್ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ವಿರುದ್ದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಂದರಪಾಳ್ಯ ಸರ್ಕಾರಿ ಪ್ರೌಢಶಾಲೆ ಮತ್ತು ಪಧವಿ ಪೂರ್ವ ಕಾಲೇಜು, ಸರ್ಕಾರಿ ಪ್ರೌಡಶಾಲೆ, ಕರಡಗೂರು, ಬೆನ್ನವಾರ ಗ್ರಾಮದ ಶ್ವೇತ ವಿದ್ಯಾಸಂಸ್ಥೆಯಲ್ಲಿ ವೃತ್ತ ನಿರೀಕ್ಷಕರಾದ ಸುರೇಶ್‌ರಾಜು, ಪಿ.ಎಸ್.ಐ ದೇವರಾಜ್ ಮತ್ತು ಪಿ.ಎಸ್.ಐ ಶ್ರೀಮತಿ ಶ್ಯಾಮಲಾ ಮಾದಕ ವಸ್ತುಗಳ ವಿರುದ್ದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ವಿವಿಧ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ನಡೆಸಿದ ವಿಶೇಷ ಜಾಗೃತಿ ಕಾರ್ಯಕ್ರಮಗಳಲ್ಲಿ ಒಟ್ಟು ೩೬೧೦ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!