• Sun. May 12th, 2024

ಸರ್ಕಾರಿ ಸೌಲಭ್ಯಗಳು ಎಲ್ಲರಿಗೂ ಸಿಗುವಂತಾಗಬೇಕು:ಗ್ರಾಪಂ ಅಧ್ಯಕ್ಷ ಬಿ.ಆರ್.ಮಂಜುನಾಥ್.

ByNAMMA SUDDI

Jan 2, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಪ್ರತಿ ಅರ್ಹರಿಗೆ ದೊರೆಯಬೇಕು ಎಂಬ ಸದುದ್ದೇಶದಿಂದ ಸರ್ಕಾರ ಅನೇಕ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೂದಿಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್.ಮಂಜುನಾಥ್ ಮನವಿ ಮಾಡಿದರು.

ಅವರು ಬೂದಿಕೋಟೆಯ ನಾಡ ಕಛೇರಿಯಲ್ಲಿ ಕಂದಾಯ ಇಲಾಖೆ ಹಮ್ಮಿಕೊಂಡಿದ್ದ ಫವತಿ ಖಾತೆ ಆಂದೋಲನ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿ, ಕುಟುಂಬದ ಹಿರಿಯರು ತೀರಿಕೊಂಡ ನಂತರ ಅವರ ಮಕ್ಕಳು, ಮೊಮ್ಮೊಕ್ಕಳು ಮತ್ತು ವಾರಸರಿಗೆ ಖಾಲೆ ಬದಲಾವಣೆ ಮಾಡಿಕೊಳ್ಳಲು ಅನೇಕ ಸಮಸ್ಯೆಗಳಿತ್ತು.

ಈ ಸಮಸ್ಯಯು ವರ್ಷಾನುಗಟ್ಟಲೆ ಮುಂದುವರೆದುಕೊಂಡು ಬರುತ್ತಿದ್ದು ಸರ್ಕಾರಿ ಸೌಲಭ್ಯ ಪಡೆಯಲಾಗದೆ ಜನ ತುಂಬಾ ಸಂಕಷ್ಟಕ್ಕೆ ಸಿಕ್ಕಿರುವುದನ್ನು ಮನಗಂಡ ಸರ್ಕಾರ ಫವತಿ ಖಾತೆ ಆಂದೋಲನ ಯೋಜನೆಯನ್ನು ಜಾರಿಗೆ ತಂದಿರುವುದು ತುಂಬಾ ಅನುಕೂಲಕರವಾಗಿದೆ ಎಂದು ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.

ಯಾರೆಲ್ಲಾ ಫವತಿ ವಾರಸು ಖಾತೆ ಬದಲಾವಣೆ ವಿಷಯದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದೀರೋ ಅಂತಹವರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಈ ಯೋಜನೆಯ ಬಗ್ಗೆ ಇನ್ನೂ ಹೆಚ್ಚು ಹೆಚ್ಚಾಗಿ ಜನತೆಗೆ ತಿಳುವಳಿಕೆ ಮೂಡಿಸಿದರೆ ಸಮಸ್ಯೆ ಇರುವ ಎಲ್ಲರೂ ಬಂದು ಅರ್ಜಿ ನೀಡಿ ಅನುಕೂಲ ಪಡೆಯಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಬೂದಿಕೋಟೆ ಗ್ರಾಮ ಲೆಕ್ಕಾಧಿಕಾರಿ ವಿನೋದ್, ಇತರೆ ವೃತ್ತಗಳ ಗ್ರಾಮ ಲೆಕ್ಕಾಧಿಕಾರಿಗಳಾದ ಮಹೇಶ್, ಅಮರೇಶ್ ಮೊದಲಾದವರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!